ನವದೆಹಲಿ: ಆರ್ಎಸ್ಎಸ್ ವಿರುದ್ಧ ಹೇಳಿಕೆ ನೀಡಿ ಮಾನನಷ್ಟ ಮೊಕದ್ದಮೆಯನ್ನು ಎದುರಿಸುತ್ತಿರುವ ರಾಹುಲ್ ಗಾಂಧಿಯವರಿಗೆ ಇದೀಗ ಸುಪ್ರೀಂಕೋರ್ಟ್ ರಿಲೀಫ್ ನೀಡಿದೆ. ಅವರ ವಿರುದ್ಧದ ಆರೋಪದ ವಿಚಾರಣೆಗೆ ಗುರುವಾರ ಸುಪ್ರೀಂ ತಡೆ ನೀಡಿದೆ.
ತನ್ನ ಮೇಲಿನ ಮಾನನಷ್ಟ ಮೊಕದ್ದಮೆಯನ್ನು ರದ್ದು ಪಡಿಸುವಂತೆ ಕೋರಿ ರಾಹುಲ್ ಈ ಹಿಂದೆ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಅವರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಬಳಿಕ ಅವರು ಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಮೊರೆ ಹೋಗಿದ್ದರು. ಇದೀಗ ಅವರ ವಿರುದ್ಧ ವಿಚಾರಣೆ ನಡೆಸುವುದಕ್ಕೆ ತಡೆ ನೀಡಲಾಗಿದೆ.
2004 ರ ಲೋಕಸಭಾ ಚುನಾವಣೆಯ ಸಂದರ್ಭ ಮಹಾರಾಷ್ಟ್ರದಲ್ಲಿ ನಡೆದ ಸಮಾವೇಶವೊಂದರಲ್ಲಿ ರಾಹುಲ್, ಆರ್ಎಸ್ಎಸ್ ಗಾಂಧೀಜಿಯವರನ್ನು ಕೊಂದ ಸಂಘಟನೆ ಎಂದು ಹೇಳಿಕೆ ನೀಡಿದ್ದರು.
ಅವರ ಈ ಹೇಳಿಕೆಯ ವಿರುದ್ಧ ಆರ್ಎಸ್ಎಸ್ ಕಾರ್ಯಕರ್ತ ರಾಜೇಶ್ ಕುಂಟೆ ಎಂಬುವವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.