ಧಾರವಾಡ : ಕರ್ನಾಟಕ ಒಲಂಪಿಕ್ ಸಂಸ್ಥೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸಹಯೋಗದಲ್ಲಿ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಫೆಬ್ರವರಿ 3 ರಿಂದ 10ರ ವರೆಗೆ ನಡೆಯಲಿರುವ ಕರ್ನಾಟಕ ರಾಜ್ಯ ಒಲಂಪಿಕ್ ಕ್ರೀಡಾಕೂಟವು ನಾಳೆ ಮಧ್ಯಾಹ್ನ 3.30ಕ್ಕೆ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಳ್ಳಲಿದೆ.
ಮುಖ್ಯ ಮಂತ್ರಿ ಸಿದ್ದರಾಮಯ್ಯ ಕ್ರೀಡಾಕೂಟ ಉದ್ಘಾಟಿಸುವರು. ಶಾಸಕರಾದ ಅರವಿಂದ ಚಂದ್ರಕಾಂತ ಬೆಲ್ಲದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಗಣಿ ಮತ್ತು ಭೂ ವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿನಯ ಕುಲಕರ್ಣಿ, ಗೃಹ ಸಚಿವ ಡಾ: ಜಿ.ಪರಮೇಶ್ವರ, ಸಾರಿಗೆ ಸಚಿವ ಆರ್. ರಾಮಲಿಂಗಾರೆಡ್ಡಿ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಯು.ಟಿ.ಖಾದರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶ್ರೀಮತಿ ಉಮಾಶ್ರೀ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಕೆ.ಆರ್.ರಮೇಶಕುಮಾರ, ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್, ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಗಳು ಹಾಗೂ ಕರ್ನಾಟಕ ಒಲಿಂಪಿಕ್ ಸಂಸ್ಥೆ ಅಧ್ಯಕ್ಷರಾದ ಕೆ.ಗೋವಿಂದರಾಜ್ ಇತರರು ಭಾಗವಹಿಸಲಿದ್ದಾರೆ.
ಅತಿಥಿಗಳಾಗಿ ಲೋಕಸಭಾ ಸಂಸದರಾದ ಪ್ರಲ್ಹಾದ ಜೋಶಿ, ರಾಜ್ಯಸಭಾ ಸಂಸದ ಡಾ. ಪ್ರಭಾಕರ ಕೋರೆ, ಶಾಸಕರಾದ ಪ್ರಸಾದ ಅಬ್ಬಯ್ಯ, ಎನ್.ಎಚ್.ಕೋನರಡ್ಡಿ, ಬಸವರಾಜ ಎಸ್. ಹೊರಟ್ಟಿ, ಶ್ರೀನಿವಾಸ ಮಾನೆ, ಎಸ್.ವ್ಹಿ.ಸಂಕನೂರ, ಪ್ರದೀಪ ಶೆಟ್ಟರ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ರೋಷನ್ ಅಲಿ ಪಾಲ್ಗೊಳ್ಳಲಿದ್ದಾರೆ.
ವಿದ್ಯಾರ್ಥಿಗಳಿಂದ ಮಧ್ಯಾಹ್ನ 2.30ಕ್ಕೆ ಕಡಪಾ ಮೈದಾನದಿಂದ ಆರಂಭಗೊಂಡು ಆರ್.ಎನ್.ಶೆಟ್ಟಿ ಕ್ರೀಡಾಂಗಣದವರೆಗೆ ಮೆರವಣಿಗೆ ನಡೆಯಲಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಸಂಜೆ 6.30 ರಿಂದ ರಾಜ್ಯದ ವಿವಿಧ ಜಿಲ್ಲೆಗಳ ಕಲಾವಿದರಿಂದ ಕರ್ನಾಟಕದ ಸಾಂಸ್ಕೃತಿಕ ವೈಭವವನ್ನು ಬಿಂಬಿಸುವ ಜಾನಪದ ಜಾತ್ರೆ ಕಾರ್ಯಕ್ರಮ, ಆಕರ್ಷಕ ಸಿಡಿಮದ್ದುಗಳು, ಬಾಣ, ಬಿರುಸುಗಳ ಪ್ರದರ್ಶನ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ. ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.