ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ಗಡಿ ಮೂಲಕ ಭಾರತ ಒಳ ನುಸುಳಲು ಯತ್ನಿಸುತ್ತಿದ್ದ ಉಗ್ರರನ್ನು ಭಾರತೀಯ ಸೇನೆ ಗುರುವಾರ ಹಿಮ್ಮೆಟ್ಟಿಸಿದೆ.
ಶಸ್ತ್ರಸಜ್ಜಿತರಾಗಿ ಬಂದಿದ್ದ ಉಗ್ರರ ಗುಂಪೊಂದು ಸಾಂಬಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ಪ್ರದೇಶದ ಬಳಿ ಬಂದು ಭಾರತ ಒಳನುಸುಳಲು ಯತ್ನ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಸೇನೆ ದಿಟ್ಟ ಉತ್ತರ ನೀಡಿದೆ.
ಉಗ್ರರು ಬಿಎಸ್ಎಫ್ ಸೇನಾ ಶಿಬಿರದ ಮೇಲೆ ಮಧ್ಯಾಹ್ನ ದಾಳಿ ಮಾಡಿದ್ದರು. ಮೂರು ಅಂಡರ್ ಬ್ಯಾರೆಲ್ ಗ್ರೆನೇಡ್ ಗಳನ್ನು ಸ್ಫೋಟಿಸಿದ್ದರು. ಈ ವೇಳೆ ಕೂದಲೆಳೆಯ ಅಂತರದಲ್ಲಿ ಯೋಧನೊಬ್ಬ ಪಾರಾಗಿದ್ದಾನೆ. ಜಮ್ಮುವಿನಲ್ಲಿ ಮಂಜು ಬೀಳುತ್ತಿದ್ದು, ಇದನ್ನೇ ತಮ್ಮ ಅನುಕೂಲಕ್ಕೆ ಬಳಸಿಕೊಳ್ಳಲು ಯತ್ನಿಸುತ್ತಿರುವ ಉಗ್ರರು ಗಡಿ ಮೂಲಕ ಭಾರತದ ಒಳನುಸುಳಲು ಯತ್ನ ನಡೆಸುತ್ತಿದ್ದಾರೆ. ವಿಧ್ವಂಸಕ ಕೃತ್ಯವೆಸಗಲು ಉಗ್ರರು ಭಾರೀ ಸಂಚು ರೂಪಿಸುತ್ತಿದ್ದಾರೆಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಜಮ್ಮುವಿನ ಅಂತಾರಾಷ್ಟ್ರೀಯ ಗಡಿಯಲ್ಲಿ ಈಗಾಗಲೇ ಹೈಅಲರ್ಟ್ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.