ಇಸ್ಲಾಮಾಬಾದ್: ಕಳೆದ ಏಳು ದಶಕಗಳಿಂದ ಭಾರತ ಸರ್ಕಾರ ಕಾಶ್ಮೀರಿ ಜನತೆಯ ಸ್ವ ನಿರ್ಧಾರದ ಹಕ್ಕನ್ನು ನಿರಾಕರಿಸುತ್ತಲೇ ಬಂದಿದೆ. ಭಾರತ ಅಂತಾರಾಷ್ಟ್ರೀಯ ಸಮುದಾಯದಲ್ಲಿ ಇತ್ತೀಚೆಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ನಿರ್ಣಯದ ಮೂಲಕ ನೀಡಿದ್ದ ಭರವಸೆಗಳನ್ನು ಕೂಡ ಈಡೇರಿಸಿಲ್ಲ ಎಂದು ಪಾಕಿಸ್ಥಾನ ಪ್ರಧಾನಿ ನವಾಜ್ ಷರೀಫ್ ಆಪಾದಿಸಿದರು.
ಕಾಶ್ಮೀರ ಐಕ್ಯಮತ ದಿನದ ಅಂಗವಾಗಿ ಮಾತನಾಡಿದ ಅವರು, ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಕಾಶ್ಮೀರ ವಿಷಯ ಅತ್ಯಂತ ಹಳೆಯ ವಿವಾದ ಮತ್ತು ಇಬ್ಭಾಗದ ಅಪೂರ್ಣ ಅಜೆಂಡಾ ಆಗಿದೆ ಎಂದು ಹೇಳಿದರು.
ಕಾಶ್ಮೀರಿ ಜನರ ಮೂಲಭೂತ ಹಕ್ಕುಗಳ ಬಗ್ಗೆ ಹೋರಾಟ ನಡೆಸಲು ಅವರಿಗೆ ನೈತಿಕ, ರಾಜತಾಂತ್ರಿಕ ಮತ್ತು ರಾಜಕೀಯ ಬೆಂಬಲ ನೀಡಲು ಪಾಕಿಸ್ಥಾನ ಇಂದು ಕಾಶ್ಮೀರಿಯರೊಂದಿಗೆ ಕಾಶ್ಮೀರ ಏಕತೆ ದಿನ ಆಚರಿಸಲು ಕೈಜೋಡಿಸುತ್ತಿದೆ ಎಂದು ಶರೀಫ್ ಹೇಳಿದರು.
ವ್ಯವಸ್ಥಿತ ಭಯೋತ್ಪಾದನೆ ಮೂಲಕ ಕಾಶ್ಮೀರದ ಮುಗ್ಧ ಜನರನ್ನು ಕೊಲ್ಲುತ್ತಿರುವ ಭಾರತೀಯ ಸೇನಾಪಡೆಗಳ ಕೃತ್ಯವನ್ನು ಪಾಕಿಸ್ಥಾನ ಬಲವಾಗಿ ಖಂಡಿಸುತ್ತದೆ. ಕಾಶ್ಮೀರಿ ಜನರು ನಿಜವಾದ ಸ್ವಾತಂತ್ರ್ಯ, ಶಾಂತಿ, ಸೌಹಾರ್ದತೆಗೆ ಹಾತೊರೆಯುವುದನ್ನು ಅರ್ಥಮಾಡಿಕೊಂಡು ಅವರಿಗೆ ಸ್ವಾತಂತ್ರ್ಯ ದೊರಕಿಸಿಕೊಡುವಲ್ಲಿ ವಿಫಲವಾಗಿದೆ ಎಂದರು.
ನಿರಂತರ ಮಾನವ ಹಕ್ಕು ಉಲ್ಲಂಘನೆ ಮತ್ತು ಭಾರತೀಯ ಪಡೆಗಳು ನಡೆಸುತ್ತಿರುವ ಭಯೋತ್ಪಾದಕ ಕೃತ್ಯಗಳನ್ನು ನಿಲ್ಲಿಸಲು ಅದರ ವಿರುದ್ಧ ಧ್ವನಿಯೆತ್ತಬೇಕು ಎಂದು ಇದೇ ಸಂದರ್ಭದಲ್ಲಿ ಪಾಕಿಸ್ಥಾನ ಅಂತಾರಾಷ್ಟ್ರೀಯ ಸಮುದಾಯಕ್ಕೆ ಕರೆ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.