ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯಲ್ಲಿ ಗಡಿ ನುಸುಳಲು ಯತ್ನಿಸುತ್ತಿದ್ದ ನಸುಳುಕೋರನೊಬ್ಬನನ್ನು ಭಾರತೀಯ ಸೇನೆ ಮಂಗಳವಾರ ಹತ್ಯೆ ಮಾಡಿದೆ.
ಬೆಳಿಗ್ಗೆ 8.15 ರ ಸುಮಾರಿಗೆ ಗಡಿ ಭಾಗದಲ್ಲಿ ಅನುಮಾನಾಸ್ಪದ ಓಡಾಟಗಳು ಕಂಡು ಬಂದಿತ್ತು. ಪಾಕಿಸ್ಥಾನದ ನುಸುಳುಕೋರರು ಭಾರತದ ಗಡಿಯಲ್ಲಿ ನುಸುಳಲು ಯತ್ನಿಸುತ್ತಿದ್ದರು. ಈ ವೇಳೆ ಸೇನೆ ಓರ್ವ ನುಸುಳುಕೋರನನ್ನು ಹತ್ಯೆ ಮಾಡಿದೆ ಎಂದು ಗಡಿ ಭದ್ರತಾ ಪಡೆಯ ಅಧಿಕಾರಿ ತಿಳಿಸಿದ್ದಾರೆ.
ಪಠಾಣ್ ಕೋಟ್ ಬಮಿಯಾಲ್ ಪ್ರದೇಶ ಸಿಂಬಲ್ ಗಡಿಯಲ್ಲಿ ಪಾಕಿಸ್ತಾನ ನುಸುಳುಕೋರನನ್ನು ಹತ್ಯೆ ಮಾಡಲಾಗಿದೆ. ನುಸುಳುಕೋರನನ್ನು ಹತ್ಯೆ ಮಾಡಿದ ಸ್ಥಳದಲ್ಲಿ ಮಂಜು ಆವರಿಸಿದ್ದು, ಮೃತದೇಹವನ್ನು ಹೊರ ತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.