ರಜೌರಿ: ಜಮ್ಮು ಮತ್ತು ಕಾಶ್ಮೀರದ ಕರಕುಶಲ ಇಲಾಖೆ ರಜೌರಿ ಜಿಲ್ಲೆಯಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ತರಬೇತಿ ಯೋಜನೆ ಅಡಿಯಲ್ಲಿ ಮಹಿಳೆಯರ ಸಬಲೀಕರಣ ಉಪಕ್ರಮವನ್ನು ಕೈಗೊಂಡಿದೆ. ಈ ಮೂಲಕ ಕಣಿವೆ ರಾಜ್ಯದ ಮಹಿಳೆಯರು ಕೌಶಲ್ಯ ಚಟುವಟಿಕೆಗಳ ಸಹಾಯದಿಂದ ತಮ್ಮನ್ನು ತಾವು ಸಬಲರನ್ನಾಗಿಸಲು ಪ್ರೋತ್ಸಾಹಿಸಲಾಗುತ್ತಿದೆ.
ಶಿಕ್ಷಣದ ಮೂಲ ಸೌಲಭ್ಯ ದೊರೆಯಲಾಗದ ಅಥವಾ ಅರ್ಧದಲ್ಲಿ ಶಾಲೆ ಬಿಟ್ಟ ಬಡತನ ರೇಖೆಗಿಂತ ಕೆಳಮಟ್ಟದಲ್ಲಿರುವ ಕುಟುಂಬದ ಹೆಣ್ಣು ಮಕ್ಕಳು ತಮ್ಮ ಅಗತ್ಯತೆಗಳನ್ನು ಪೂರಯಸಲು ಸಹಾಯ ಮಾಡುವ ದೃಷ್ಟಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ.
ಇದು ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ರಜೌರಿಯಲ್ಲಿ ಈವರೆಗೆ 23 ಉದ್ಯೋಗ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ಪ್ರಾಥಮಿಕ ಮತ್ತು ಉನ್ನತ ತರಬೇತಿ ಕೇಂದ್ರ ಎಂಬ ಎರಡು ರೀತಿಯ ಕೇಂದ್ರಗಳಿದ್ದು, ಪ್ರಾಥಮಿಕ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆಯುವವರಿಗೆ ಮಾಸಿಕ 500 ರೂ. ಹಾಗೂ ಉನ್ನತ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆಯುವವರಿಗೆ ಮಾಸಿಕ 700 ರೂ. ನೀಡಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.