ನವದೆಹಲಿ: ವಿಧಾನಸಭಾ, ಲೋಕಸಭಾ ಚುನಾವಣೆಗಳನ್ನು ಏಕಕಾಲಕ್ಕೆ ನಡೆಸುವ ಪ್ರಸ್ತಾವನೆಯನ್ನು ಪರಿಗಣಿಸುವಂತೆ ರಾಜಕೀಯ ಪಕ್ಷಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಕೋರಿದ್ದಾರೆ.
ರಾಜಕೀಯ ಪರಿಗಣನೆಯನ್ನು ಮೀರಿ ಏಕಕಾಲಕ್ಕೆ ಚುನಾವಣೆ ನಡೆಸುವ ಸಂಬಂಧ ಎಲ್ಲ ಪಕ್ಷಗಳು ಚಿಂತನೆ ನಡೆಸಬೇಕಿವೆ ಎಂದು ಮೋದಿ ಅಭಿಪ್ರಾಯಪಟ್ಟಿದ್ದು, ಶೈಕ್ಷಣಿಕ ಕ್ಷೇತ್ರಕ್ಕೆ ಉಂಟಾಗಬಹುದಾದ ಸಮಸ್ಯೆ, ಸರ್ಕಾರಿ ಸಿಬ್ಬಂದಿಗಳ ಬಳಕೆ, ಅತಿ ಹೆಚ್ಚು ಖರ್ಚು ಸೇರಿದಂತೆ ಬೇರೆ ಬೇರೆ ಸಮಯಗಳಲ್ಲಿ ಚುನಾವಣೆಗಳನ್ನು ಎದುರಿಸಿದರೆ ಉಂಟಾಗಬಹುದಾದ ಸಮಸ್ಯೆ ಬಗ್ಗೆ ಉಲ್ಲೇಖಿಸಿದ್ದಾರೆ.
ಒಂದು ಪಕ್ಷ ಅಥವಾ ಒಂದು ಸರ್ಕಾರದಿಂದ ಇದನ್ನು ಮಾಡಲು ಸಾಧ್ಯವಿಲ್ಲ. ಏಕಕಾಲಕ್ಕೆ ಚುನಾವಣೆ ನಡೆಸುವ ಪ್ರಕ್ರಿಯೆಯಿಂದ ನಮಗೂ ಸೇರಿದಂತೆ ಎಲ್ಲರಿಗೂ ಅಲ್ಪ ಪ್ರಮಾಣದ ನಷ್ಟ ಉಂಟಾಗಲಿದೆ. ಆದರೆ ಇದನ್ನು ರಾಜಕೀಯ ದೃಷ್ಟಿಕೋನದಿಂದ ನೋಡಬಾರದು ಎಂದು ಮೋದಿ ಎಲ್ಲ ಪಕ್ಷಗಳಿಗೆ ಕರೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.