ರಾಯ್ಪುರ: ನಕ್ಸಲ್ ಸಮಸ್ಯೆಯಿಂದಾಗಿ ಹಿಂದುಳಿದಿರುವ ಛತ್ತೀಸ್ಗಢವನ್ನು ಅಭಿವೃದ್ಧಿ ಪಥದತ್ತ ಮುನ್ನಡೆಸಲು ಪ್ರಧಾನಿ ನರೇಂದ್ರ ಮೋದಿ ಬಯಸಿದ್ದಾರೆ. ಹೀಗಾಗೀ ಅವರು ನಕ್ಸಲ್ ಉಪಟಳ ಹೆಚ್ಚಾಗಿರುವ ದಾಂತೇವಾಡ ಮತ್ತು ಬಸ್ತರ್ ಜಿಲ್ಲೆಗಳಲ್ಲಿ ಬೃಹತ್ ಯೋಜನೆಗಳನ್ನು ಆರಂಭಿಸಲಿದ್ದಾರೆ.
ಮೇ ೯ರಂದು ಛತ್ತೀಸ್ಗಢಕ್ಕೆ ತೆರಳಲಿರುವ ಮೋದಿ, ದಾಂತೇವಾಡದ ದಿಲ್ಮಿಲಿ ಎಂಬ ಹಳ್ಳಿಯಲ್ಲಿ ಬೃಹತ್ ಉಕ್ಕು ಸ್ಥಾವರ ನಿರ್ಮಾಣಕ್ಕೆ ಚಾಲನೆ ನೀಡಲಿದ್ದಾರೆ. ಅಲ್ಲದೇ ಬಸ್ತರ್ನ ರೌಘಾಟ್-ಜಗದಾಲ್ಪುರ ನಡುವಿನ 140 ಕಿ.ಮೀ ಉದ್ದದ ರೈಲು ಮಾರ್ಗದ ಎರಡನೇ ಹಂತದ ಕಾಮಗಾರಿಗೆ ಅಡಿಗಲ್ಲು ಇಡಲಿದ್ದಾರೆ.
ಅಷ್ಟೇ ಅಲ್ಲದೇ ಅವರು ಛತ್ತೀಸ್ಗಢದ ಬುಡಕಟ್ಟು ವಿದ್ಯಾರ್ಥಿಗಳೊಂದಿಗೆ, ಜನರೊಂದಿಗೆ ನೇರ ಸಂವಾದ ನಡೆಸಿ ಅವರ ಕಷ್ಟ ಕಾರ್ಪಣ್ಯಗಳನ್ನು ಅರಿತುಕೊಳ್ಳಲಿದ್ದಾರೆ. ದಾಂತೇವಾಡದಲ್ಲಿ ಬೃಹತ್ ಸಮಾವೇಶವನ್ನೂ ನಡೆಸಲಿದ್ದಾರೆ.
ಮೋದಿ ಆಗಮನದ ಹಿನ್ನಲೆಯಲ್ಲಿ ಅಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. 10 ಸಾವಿರಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.