ನವದೆಹಲಿ: ಲೋಕಸಭೆ ಮತ್ತು ರಾಜ್ಯ ಸಭೆ ಈ ಎರಡೂ ಸಂಸತ್ ಸದನಗಳ ಅಧಿವೇಶನವನ್ನು ಮಾರ್ಚ್ 9ಕ್ಕೆ ಮುಂದೂಡಲಾಗಿದ್ದು, ಬಜೆಟ್ನ ಮೊದಲ ಹಂತ ಗುರುವಾರ ಕೊನೆಗೊಂಡಿದೆ.
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಭಾಷಣದೊಂದಿಗೆ ಜನವರಿ 31ರಂದು ಸಂಸತ್ನ ಎರಡೂ ಮನೆಗಳ ಜಂಟಿ ಅಧಿವೇಶನ ಆರಂಭಗೊಂಡಿತ್ತು.
ಸ್ವತಂತ್ರ ಭಾರತದ ಇತಿಹಾಸದಲ್ಲಿ ಮೊದಲ ಬಾರಿ ಸಾಮಾನ್ಯ ಬಜೆಟ್ ಜೊತೆ ರೈಲ್ವೆ ಬಜೆಟ್ ವಿಲೀನಗೊಳಿಸಲಾಗಿದ್ದು, ಇದನ್ನು ಫೆ.1ರಂದು ಮಂಡಿಸಲಗಿತ್ತು.
ಮಾಜಿ ಪ್ರಧಾನಿ ಮನ್ಮೋಹನ್ ಸಿಂಗ್ ಅವರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ಹರಿಹಾಯ್ದಿದ್ದು, ಇದರಿಂದಾಗಿ ಕಾಂಗ್ರೆಸ್, ಆರ್ಜಕೆಡಿ ಮತ್ತು ಎನ್ಸಿಪಿ ಪಕ್ಷಗಳು ಲೋಕಸಭೆಯಿಂದ ಹೊರನಡೆದಿದ್ದರು.
ಶೂನ್ಯ ವೇಳೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕೂಡ ಪ್ರಧಾನಿ ಮೋದಿ ಅವರು ಈ ವಿಚಾರವಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದರು.
ಇದಕ್ಕೆ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ವಿರೋಧ ವ್ಯಕ್ತಪಡಿಸಿದ್ದು, ರಾಜ್ಯಸಭೆಗೆ ಸಂಬಂಧಿಸಿದ ವಿಚಾರವನ್ನು ಲೋಕಸಭೆಯಲ್ಲಿ ಎತ್ತಲು ಸಾಧ್ಯವಿಲ್ಲ ಎಂದು ಹೇಳಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.