ನವದೆಹಲಿ: ಕೇಂದ್ರ ಸಚಿವರು ತಾವು ಕಳೆದ 3 ತಿಂಗಳಲ್ಲಿ ಕೈಗೊಂಡ ಪ್ರವಾಸದ ವಿವರಗಳನ್ನು ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕೇಳಿಕೊಂಡಿದ್ದಾರೆ.
ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಧಾನಿ ಮೋದಿ ಅವರು ಸಚಿವರು ಸೋಮವಾರದ ಒಳಗಾಗಿ ತಮ್ಮ ಪ್ರವಾಸದ ಮಾಹಿತಿಗಳನ್ನು ನೀಡುವಂತೆ ನಿರ್ದೇಶಿಸಿದ್ದಾರೆ. ಸಚಿವರು ಕೇಂದ್ರ ಸರ್ಕಾರದ ಅನಾಣ್ಯೀಕರಣ ಮತ್ತು ಇತರ ಉಪಕ್ರಮಗಳನ್ನು ಪ್ರಚುರಪಡಿಸುತ್ತಿದ್ದಾರೆಯೇ ಎಂದು ಖಚಿತಪಡಿಸುವ ಗುರಿಯೊಂದಿಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕೇಂದ್ರ ಸರ್ಕಾರದ ವಿವಿಧ ಉಪಕ್ರಮಗಳಲ್ಲದೇ ಸಚಿವರು ತಮ್ಮ ಕಚೇರಿ ಕೆಲಸ ಹಾಗೂ ಕ್ಷೇತ್ರಗಳ ಕಾರ್ಯಗಳನ್ನು ನಿರ್ವಹಿಸುತ್ತಿದ್ದಾರೆಯೇ ಎಂಬ ಮಾಹಿತಿ ಪಡೆಯುವುದು ಇದರ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಸಂಬಂಧ ಕೇಂದ್ರ ಸಚಿವಾಲಯಗಳ ಜೊತೆ ಸಹಕರಿಸುವಂತೆ ಗ್ರಾಮೀಣಾಭಿವೃದ್ಧಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರಿಗೆ ನಿರ್ದೇಶನ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.