ಬೆಂಗಳೂರು: ಸಾಂಪ್ರದಾಯಿಕ ಕ್ರೀಡೆ ಕಂಬಳ ಹಾಗೂ ಎತ್ತಿನ ಗಾಡಿ ಓಟ ಸ್ಪರ್ಧೆಗೆ ಸಂಬಂಧಿಸಿದ ಕಾನೂನು ಮಸೂದೆಗೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ.
ಪ್ರಾಣಿಗಳ ಹಿಂಸೆ ತಡೆ (ಕರ್ನಾಟಕ ತಿದ್ದುಪಡಿ) ಮಸೂದೆ, 2017ನ್ನು ಫೆಬ್ರವರಿ 10ರಂದು ವಿಧಾಸಭೆಯಲ್ಲಿ ಪರಿಚಯಿಸಲಾಗಿತ್ತು.
ಪ್ರಾಣಿಗಳ ಹಿಂಸೆ ತಡೆ ಮಸೂದೆಯನ್ನು ಪಶುಸಂಗೋಪನಾ ಸಚಿವ ಎ. ಮಂಜು ಅವರು ಮಂಡಿಸಿದ್ದು, ಎಲ್ಲ ಶಾಸಕರ ಬೆಂಬಲದೊಂದಿಗೆ ಅಂಗೀಕರಿಸಲಾಗಿದೆ.
ನಾಡಿನ ಸಂಸ್ಕೃತಿ, ಸಂಪ್ರದಾಯವನ್ನು ಉಳಿಸುವಲ್ಲಿ ಸಾಂಪ್ರದಾಯಿಕ ಕ್ರೀಡೆ ಕಂಬಳ ಮತ್ತು ಎತ್ತಿನ ಬಂಡಿ ಓಟ ನಿರ್ವಹಿಸಿದ ಪ್ರಮುಖ ಪಾತ್ರವನ್ನು ಪರಿಗಣಿಸಿ ಹಾಗೂ ಪ್ರಾಣಿಗಳ ತಳಿಗಳನ್ನು ಉಳಿವಿಗಾಗಿ ಈ ಕ್ರೀಡೆ ನಡೆಸಲು ಅಂಗೀಕಾರ ನೀಡಲಾಗಿದೆ.
ಪ್ರಾಣಿಗಳ ಮೇಲಿನ ಅನಗತ್ಯ ಹಿಂಸೆಯನ್ನು ತಡೆಗಟ್ಟಲು ಪ್ರಾಣಿಗಳ ಹಂಸೆ ತಡೆ ಕಾಯಿದೆ 1960 (ಕೇಂದ್ರ ಅಧಿನಿಯಮ 1960ರ 59ನೇ ಕಾಯಿದೆ)ಗೆ ಜಾರಿಗೊಳಿಸಲಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಕಂಬಳ ಹಾಗೂ ಉತ್ತರ ಕರ್ನಾಟಕದಲ್ಲಿ ಸಾಂಪ್ರದಾಯಿಕ ಕಂಬಳ ಆಚರಿಸಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.