ಲಖಿಮಪುರ್ ಖೇರಿ: ಬಿಜೆಪಿ ಅಧಿಕಾರಕ್ಕೆ ಬಂದು 14 ದಿನದೊಳಗೆ ಕಬ್ಬು ಬೆಳೆಗಾರರ ಸಾಲ ಮನ್ನಾ ಮಾಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.
ಲಖಿಮಪುರ್ ಖೇರಿಯಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಭಾಗಿಯಾಗಿ ಮಾತನಾಡಿರುವ ಅವರು, ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷ ಉಳಿಯುವುದಕ್ಕೆ ಅವಕಾಶವಿಲ್ಲ. ನಮಗೆ ಒಂದು ಅವಕಾಶವನ್ನು ಕೊಡಿ. 6 ತಿಂಗಳೊಳಗೆ ಎಲ್ಲ ಕ್ರಿಮಿನಲ್ಗಳನ್ನೂ ನಾವು ಜೈಲಿನ ಹಿಂದೆ ಇರುವಂತೆ ಮಾಡುತ್ತೇವೆ ಎಂದಿದ್ದಾರೆ.
ಅಭಿವೃದ್ಧಿ ಕೆಲಸದ ಬಗ್ಗೆ ಮಾತನಾಡುವ ಅಖಿಲೇಶ ಯಾದವ್ ಅವರು, ಜನರನ್ನು ಮೂರ್ಖರನ್ನಾಗಿ ಮಾಡುತ್ತಿದ್ದಾರೆ. ವಿವಿಧ ಯೋಜನೆಗಳಿಗೆ ಕೇಂದ್ರ ಸಾಕಷ್ಟು ಹಣ ಬಿಡುಗಡೆ ಮಾಡಿದರೂ ಎಲ್ಲ ಯೋಜನೆಗಳೂ ಅಪೂರ್ಣವಾಗಿವೆ ಎಂದು ಮೋದಿ ಅಖಿಲೇಶ್ ವಿರುದ್ಧ ಹರಿಹಾಯ್ದಿದ್ದಾರೆ.
ಮೆಟ್ರೋ ರೈಲು ಯೋಜನೆ, ಮೇದಾಂತ ಆಸ್ಪತ್ರೆಗಳ ಸ್ಥಿತಿಗತಿಗಳನ್ನು ವಿವರಿಸಿದ ಪ್ರಧಾನಿ ಮೋದಿ ಅವರು, ಜನತೆಗೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕಿಡಿ ಕಾರಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.