ಮುಂಬೈ: ಭಾರತ ಸಾರ್ಕ್ನ್ನು ಸಂಪೂರ್ಣವಾಗಿ ಕೈಬಿಟ್ಟಿಲ್ಲ. ಆದರೆ ಪ್ರಾದೇಶಿಕ ಹೊಂದಾಣಿಕೆ ಹಾಗೂ ಸಮಗ್ರತೆಯ ಅವಕಾಶಗಳ ನಿರೀಕ್ಷೆಯಲ್ಲಿದೆ ಎಂದು ಭಾರತದ ವಿದೇಶಾಂಗ ಕಾರ್ಯದರ್ಶಿ ಜೈ ಶಂಕರ್ ಹೇಳಿದ್ದಾರೆ.
ಅವರು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಗೇಟ್ವೇ ಸಂವಾದದಲ್ಲಿ ಭಾಗವಹಿಸಿ, ರಾಜಕೀಯ ಬದಲಾವಣೆ ಮತ್ತು ಆರ್ಥಿಕ ಅಸ್ಥಿರತೆ ಕುರಿತ ಚರ್ಚೆಯಲ್ಲಿ ಮಾತನಾಡಿದರು.
ಪಾಕಿಸ್ಥಾನದಲ್ಲಿನ ಭಯೋತ್ಪಾದನೆ ಜಾಗತಿಕ ಮಟ್ಟದಲ್ಲಿ ಆತಂಕ ಉಂಟುಮಾಡಿದೆ. ಈ ಹಿನ್ನೆಲೆಯಲ್ಲಿ ಪಾಕ್ ತನ್ನ ನೆಲದಲ್ಲಿರುವ ಭಯೋತ್ಪಾದಕ ಕಾರ್ಖಾನೆಗಳನ್ನು ನಿಯಂತ್ರಿಸುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.
ಸಮಸ್ಯೆಗಳಿಗೆ ಹೆದರಿಕೊಂಡಿದ್ದರೆ ಪರಿಹಾರ ದೊರಕುವುದಿಲ್ಲ. ಉಭಯ ದೇಶಗಳೂ ಪರಸ್ಪರ ಚರ್ಚಿಸಿ ಉತ್ತಮ ಬಾಂಧವ್ಯ ಕಾಪಾಡಿಕೊಳ್ಳುವ ನಿಟ್ಟನಿಲ್ಲಿ ಪ್ರಯತ್ನಿಸುವ ಅವಶ್ಯಕತೆ ಇದೆ ಎಂದು ಚೀನಾ ಭಾರತದ ಸಂಬಂಧ ಕುರಿತು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.