ನವದೆಹಲಿ: ತ್ರಿವಳಿ ತಲಾಖ್ಗೆ ಸಂಬಂಧಿಸಿದ ವಿವಾದವನ್ನು ಮಾನವ ಹಕ್ಕಿಗೆ ಸಂಬಂಧಿಸಿದ ವಿವಾದವೆಂದು ಪರಿಗಣಿಸಲಾಗುವುದು ಎಂದ ಸುಪ್ರೀಂ, ಸಮಾನ ನಾಗರಿಕ ಸಂಹಿತೆ ಇದಕ್ಕಿಂತ ಭಿನ್ನವಾಗಿದೆ ಎಂದು ಅಭಿಪ್ರಾಯಪಟ್ಟಿದೆ.
ತ್ರಿವಳಿ ತಲಾಖ್ ಇದು ಮಾನವ ಹಕ್ಕುಗಳಿಗೆ ಸಂಬಂಧಿಸಿದ್ದು, ಇದನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಬೇಕಿದೆ ಎಂದು ನ್ಯಾಯಾಲಯ ಹೇಳಿದೆ. ಸುಪ್ರಿಂ ಕೋರ್ಟ್ನ ಮುಖ್ಯ ನ್ಯಾ. ಜೆ.ಎಸ್.ಖೇಹರ್ ಅವರು, ತ್ರಿವಳಿ ತಲಾಖ್ಗೆ ಸಂಬಂಧಿಸಿದಂತೆ ಮನವಿ ಸಲ್ಲಿಸಿದ್ದ ಶಾಯರಾ ಬಾನು ಅವರ ವಿಚರಣೆ ನಂತರ ಈ ರೀತಿಯಾಗಿ ಹೇಳಿದ್ದಾರೆ.
ತ್ರಿವಳಿ ತಲಾಖ್ ಪದ್ಧತಿಯನ್ನು ತಡೆಯುವಂತೆ ಕೋರಿ ಅನೇಕ ಮಹಿಳೆಯರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಅಲ್ಲದೇ ತ್ರಿವಳಿ ತಲಾಖ್ ಇದು ಲಿಂಗತಾರತಮ್ಯಕ್ಕೆ ಅವಕಾಶ ಮಾಡಿಕೊಡುತ್ತದೆ. ಇದು ಸಂವಿಧಾನ ವಿರೋಧಿಯೂ ಹೌದು ಎಂದು ಕೇಂದ್ರ ಸರ್ಕಾರವೂ ತಿಳಿಸಿದೆ. ಈ ಕುರಿತು ಮೇ.11 ರಂದು ಆದೇಶ ನೀಡುವುದಾಗಿ ನ್ಯಾಯಾಲಯ ಹೇಳಿದೆ.
2016 ರ ಡಿಸೆಂಬರ್ನಲ್ಲಿ ಈ ಕುರಿತು ಅಲಹಾಬಾದ್ ನ್ಯಾಯಾಲಯ ಇಸ್ಲಾಂನಲ್ಲಿರುವ ತ್ರಿವಳಿ ತಲಾಖ್ ಪದ್ಧತಿಯು ಅಸಾಂವಿಧಾನಿಕವಾಗಿದೆ. ಇದು ಮುಸ್ಲಿಂ ಮಹಿಳೆಯರ ಹಕ್ಕನ್ನು ಚ್ಯುತಿಗೊಳಿಸುತ್ತದೆ ಎಂದು ಅಭಿಪ್ರಾಯಪಟ್ಟಿತ್ತು.
ಮಹಿಳೆಯ ಹಕ್ಕನ್ನು ಕಸಿಯುವುದು ಸಂವಿಧಾನ ಬಾಹಿರ. ಯಾವುದೇ ವೈಯಕ್ತಿಕ ಕಾನೂನುಗಳೂ ಸಂವಿಧಾನಕ್ಕಿಂತ ಮೇಲಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು.
ಅಖಿಲ ಭಾರತ ಮುಸ್ಲಿಂ ವಯಕ್ತಿಕ ಕಾನೂನು ಮಂಡಳಿ ತ್ರಿವಳಿ ತಲಾಖ್ ಸಮರ್ಥಿಸಿಕೊಂಡಿದ್ದಲ್ಲದೇ, ಮಹಿಳೆಯನ್ನು ಕೊಲ್ಲುವುದಕ್ಕಿಂತ ವಿಚ್ಛೇಧನ ನೀಡುವುದೇ ಯೋಗ್ಯ. ಧಾರ್ಮಿಕವಾಗಿ ಲಭ್ಯವಾಗಿರುವ ಹಕ್ಕುಗಳನ್ನು ನ್ಯಾಯಾಲಯದ ಅಂಗಳದಲ್ಲಿ ಪ್ರಶ್ನಿಸುವಂತಿಲ್ಲ ಎಂದೂ ಮಂಡಳಿ ಹೇಳಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.