ನವದೆಹಲಿ: ಇಂದು ಬೆಳಿಗ್ಗೆ ಜಮ್ಮು ಕಾಶ್ಮೀರದ ಬಂಡಿಪೋರ ಬಳಿ ನಡೆದ ಉಗ್ರರ ದಾಳಿಯನ್ನು ಖಂಡಿಸಿರುವ ರಕ್ಷಣಾ ತಜ್ಞ ಖಮರ್ ಅಘಾ, ಪಾಕಿಸ್ಥಾನದ ಮೇಲೆ ಸರ್ಜಿಕಲ್ ದಾಳಿ ಇನ್ನಷ್ಟು ಆಗಬೇಕಿದೆ ಎಂದು ಹೇಳಿದ್ದಾರೆ.
ಕಾಶ್ಮೀರವು ಭಾರತದ ಅವಿಭಾಜ್ಯ ಅಂಗ. ಅದನ್ನು ಪಾಕ್ ಆಕ್ರಮಿಸಿದೆ. ಈ ಸಮಸ್ಯೆಯನ್ನು ನಾವು ಶಾಂತಿಯುತವಾಗಿ ಬಗೆಹರಿಸಲು ಸಿದ್ಧವಿದ್ದೇವೆ. ಆದರೆ ಪಾಕ್ ತನ್ನ ನಡೆ ಬದಲಾಯಿಸಿಕೊಳ್ಳದಿದ್ದಲ್ಲಿ ಪರಿಣಾಮ ಅನುಭವಿಸಬೇಕಾಗುತ್ತದೆ ಎಂದು ಅಘಾ ಹೇಳಿದ್ದಾರೆ.
ಪಾಕಿಸ್ಥಾನ ಅಂತಾರಾಷ್ಟ್ರೀಯ ಎಲ್ಲ ನಿಯಮಗಳನ್ನು ಗಾಳಿಗೆ ತೂರುತ್ತಲೇ ಬಂದಿದ್ದು, ಈ ರೀತಿಯ ಕಾನೂನು ಬಾಹಿರ ದಾಳಿಗಳನ್ನು ಮಾಡುತ್ತಿದೆ. ಇದಕ್ಕೆ ಪ್ರತಿಯಾಗಿ ಭಾರತ ಕ್ರಮ ಕೈಗೊಳ್ಳುವ ಸಮಯವೂ ಬಂದಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಮಂಗಳವಾರ ನಡೆದ ಘಟನೆ ನಡೆಯಲ್ಲಿ ಮೂವರು ಸೈನಿಕರು ಬಲಿಯಾಗಿದ್ದು, ಓರ್ವ ಉಗ್ರ ಹತನಾಗಿದ್ದಾನೆ. ಇದೇ ರೀತಿ ಪಾಕ್ ಪ್ರೇರಿತ ಉಗ್ರರು ಗಡಿಯಲ್ಲಿ ನಿಯಮ ಉಲ್ಲಂಘಿಸುತ್ತ ನಮ್ಮ ದೇಶದ ಶಾಂತಿ ಕದಡುತ್ತಲೇ ಬಂದಿದ್ದಾರೆ. ಅವರಿಗೆ ತಕ್ಕ ಉತ್ತರ ನೀಡಬೇಕಿದೆ ಎಂದು ಅಘಾ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.