ನವದೆಹಲಿ: ಉತ್ತರಪ್ರದೇಶದಲ್ಲಿ ಎರಡನೇ ಹಂತದ ಮತದಾನ ಇಂದು ಆರಂಭವಾಗಿದ್ದು, 67 ಕ್ಷೇತ್ರಗಳಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಇನ್ನೊಂದೆಡೆ ಉತ್ತರಾಖಂಡ್ ನ 69 ವಿಧಾನಸಭಾ ಕ್ಷೇತ್ರಗಳಲ್ಲೂ ಮತದಾನ ಆರಂಭವಾಗಿದೆ.
2012 ರಲ್ಲಿ ನಡೆದ ಚುನಾವಣೆಯಲ್ಲಿ ಈ 67 ಕ್ಷೇತ್ರಗಳಲ್ಲಿ ಸಮಾಜವಾದಿ ಪಕ್ಷ 34 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಈ ಬಾರಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಅಖಾಡಕ್ಕೆ ಇಳಿದಿದೆ. ಬಿಎಸ್ಪಿ 18, ಬಿಜೆಪಿ 10 ಮತ್ತು ಕಾಂಗ್ರೆಸ್ 3 ಸ್ಥಾನ ಗೆದ್ದಿದ್ದವು. ಈ ಹಂತದಲ್ಲಿ ಒಟ್ಟು 720 ಅಭ್ಯರ್ಥಿಗಳು ಕಣದಲ್ಲಿದ್ದು 2.28 ಕೋಟಿ ಜನರು ಹಕ್ಕು ಚಲಾಯಿಸಲಿದ್ದಾರೆ.
23,693 ಮತಗಟ್ಟೆಗಳನ್ನು ತೆರೆಯಲಾಗಿದೆ. ಸಹರನ್ಪುರ್, ಬಿಜನೋರ್, ಮೊರಾದಾಬಾದ್, ಸಂಭಲ್, ರಾಂಪುರ, ಬರೇಲಿ, ಅಮ್ರೋಹಾ, ಪಿಲಿಭಿಟ್, ಖೇರಿ, ಷಹಜಹಾನ್ಪುರ ಮತ್ತು ಬದೌನ್ ನಲ್ಲಿ ಮತದಾನ ನಡೆಯುತ್ತಿದ್ದು, ಭಾರೀ ಬಂದೋಬಸ್ತ್ ಮಾಡಲಾಗಿದೆ.
74.20 ಲಕ್ಷ ಮಂದಿ ಹಕ್ಕು ಚಲಾಯಿಸುತ್ತಿದ್ದಾರೆ. ಕರ್ಣಪ್ರಯಾಗ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುಲದೀಪ್ ಸಿಂಗ್ ಅವರು ಕಳೆದ ಭಾನುವಾರ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಕಾರಣ ಈ ಕ್ಷೇತ್ರದ ಚುನಾವಣೆಯನ್ನು ಮಾರ್ಚ್ ೯ಕ್ಕೆ ಮುಂದೂಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.