ನವದೆಹಲಿ: ವಿವಾಹಿತ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ಒಂದೇ ಕೇಡರ್ನಲ್ಲಿ ಕೆಲಸ ನಿರ್ವಹಿಸಲು ಅನುಕೂಲವಾಗುವಂತೆ ಪ್ರದಾನಿ ನರೇಂದ್ರ ಮೋದಿ ಅವರು ಇದರ ಸೇವಾ ನಿಯಮಗಳನ್ನು ಬದಲಾಯಿಸಿದ್ದಾರೆ.
ಪ್ರಸ್ತುತ ಅಸ್ತಿತ್ವದಲ್ಲಿರುವ ಮಾರ್ಗಸೂಚಿಯಂತೆ ಭಾರತೀಯ ಸೇವಾ ಅಧಿಕಾರಿಗಳು- ಭಾರತೀಯ ಆಡಳಿತ ಸೇವೆ (ಐಎಎಸ್), ಭಾರತೀಯ ಪೊಲೀಸ್ ಸೇವೆ ಹಾಗೂ ಭಾರತೀಯ ಅರಣ್ಯ ಸೇವೆ (ಐಎಫ್ಎಸ್) ಈ ಎಲ್ಲ ಸೇವೆಗಳಲ್ಲಿ ಕಾರ್ಯನಿರ್ವಹಿಸುವ ಪತಿ ಹಾಗೂ ಪತ್ನಿ ಕೆಲಸ ನಿರ್ವಹಿಸಲು ಒಂದೇ ಕೇಡರ್ನ್ನು ಆಯ್ಕೆ ಮಾಡಬಹುದು.
ತಮಿಳುನಾಡಿನ ಐಎಎಸ್ ಅಧಿಕಾರಿ ಪಿ. ಪರ್ತೀಭನ್ ತಮ್ಮದೇ ಬ್ಯಾಚ್ನ ಐಪಿಎಸ್ ಅಧಿಕಾರಿ, ದೆಹಲಿಯ ನಿಶಾ ಅವರನ್ನು ವಿವಾಹವಾಗಿದ್ದು, ಅನಂತರ ೨೦೧೧ರಲ್ಲಿ ಈ ಬಗ್ಗೆ ಮನವಿ ಸಲ್ಲಿಸಿದ್ದರು. ಈ ವಿಚಾರವಾಗಿ ಇದರ ನಿಯಮಗಳ ತಿದ್ದುಪಡಿಗೆ ನಿರ್ಧರಿಸಲಾಗಿದೆ.
ಅಧಿಕಾರಿಗಳ ಇಂಟರ್- ಕ್ಯಾಡರ್ ವರ್ಗಾವಣೆ ಮತ್ತು ದೆಪ್ಯೂಟೇಷನ್ ಪ್ರಕರಣಗಳನ್ನು ನಿರ್ಧರಿಸುವ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ಕಾರ್ಯದರ್ಶಿಗಳ ನೇತೃತ್ವದ ಸಮಿತಿ ಎದುರು ಈ ವಿಚಾರವನ್ನು ಇಡಲಾಗಿತ್ತು.
ಸಮಿತಿ ಅನಮತರ ಮಾರ್ಗಸೂರ್ಚಿಯ ತಿದ್ದುಪಡಿಗೆ ಶಿಫಾರಸ್ಸು ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನೇಮಕಾತಿಗಳ ಸಂಪುಟ ಸಮಿತಿ ಅನುಮೋದನೆ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.