ನವದೆಹಲಿ: ಭಯೋತ್ಪಾದಕರನ್ನು ಕಾಶ್ಮೀರಿಗಳು ಯಾರಾದರೂ ಬೆಂಬಲಿಸಿದರೆ ಅವರನ್ನೂ ದೇಶ ವಿರೋಧಿಗಳೆಂದೇ ಪರಿಗಣಿಸಲಾಗುವುದು ಎಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೇಳಿದ್ದಾರೆ.
ಬಂಡಿಪೋರದಲ್ಲಿ ಉಗ್ರರ ವಿರುದ್ಧದ ಎನ್ಕೌಂಟರ್ ದಾಳಿಯಲ್ಲಿ ಹುತಾತ್ಮರಾದವರಿಗೆ ಗೌರವ ಸಲ್ಲಿಸಿ ಮಾತನಾಡಿದ ಅವರು, ಸ್ಥಳೀಯ ಅನೇಕ ಯುವಕರು ಕೈಗೆ ಗನ್ ಹಿಡಿಯುವುದಲ್ಲದೇ, ಇಸಿಸ್ನ ಬಾವುಟಗಳನ್ನು ಪ್ರದರ್ಶಿಸುತ್ತಾರೆ. ಈ ರೀತಿಯ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಸ್ಥಳೀಯರೂ ಉಗ್ರರ ಚಟುವಟಿಕೆಗಳಿಗೆ ಸಾಥ್ ನೀಡಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದೂ ಅವರು ಎಚ್ಚರಿಸಿದ್ದಾರೆ.
ಯುವಕರನ್ನು ಕೊಲ್ಲಬೇಕೆಂಬ ಬಯಕೆ ನಮಗಿಲ್ಲ, ಆದರೆ ದೇಶ ವಿರೋಧಿ ಕೃತ್ಯಗಳಲ್ಲಿ ಭಾಗಿಯಾದರೆ ಅವರ ವಿರುದ್ಧ ಕ್ರಮ ಕೈಗೊಳ್ಳುವುದು ಅನಿವಾರ್ಯ. ಅದರ ಬದಲು ಅಂಥವರು ಮುಖ್ಯವಾಹಿನಿಗೆ ಬಂದು ಸೈನಿಕರಿಗೆ ಬೆಂಬಲ ನೀಡಿದ್ದೇ ಆದಲ್ಲಿ ದೇಶಕ್ಕೂ ಒಳಿತು ಎಂದು ಅಭಿಪ್ರಾಯಪಟ್ಟಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.