ನವದೆಹಲಿ: ಭಾರತ ಹಾಗೂ ಅಮೇರಿಕಾ ನಡುವಿನ ಸಂಬಂಧಗಳನ್ನು ವೃದ್ಧಿಸುವುದು, ಭಯೋತ್ಪಾದನೆ ನಿಗ್ರಹ ಹಾಗೂ ಭದ್ರತೆ ಮತ್ತು ರಕ್ಷಣಾ ಕ್ಷೇತ್ರದಲ್ಲಿ ಸಹಕಾರ ಬಲಪಡಿಸುವ ಬಗ್ಗೆ ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ಅಮೇರಿಕಾದ ವಿದೇಶಾಂಗ ಕಾರ್ಯದರ್ಶಿ ರೆಕ್ಸ್ ಟಿಲ್ಲೆರ್ಸನ್ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.
ಈ ಇಬ್ಬರು ನಾಯಕರು ಭಯೋತ್ಪಾದನೆ ವಿರುದ್ಧ ಜಾಗತಿಕ ಹೋರಾಟ ನಡೆಸಲು ನಿಕಟವಾಗಿ ಸಹಕರಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ಧಾರಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಸಚಿವೆ ಸುಷ್ಮಾ ಸ್ವರಾಜ್ ಹಾಗೂ ಟಿಲ್ಲರ್ಸನ್ ಭಾರತ ಹಾಗೂ ಅಮೇರಿಕಾ ಜೊತೆಯಾಗಿ ಕಾರ್ಯ ನಿರ್ವಹಿಸಿ, ಬಹುಮುಖ ಆಯಕಟ್ಟಿನ ಪಾಲುದಾರಿಕೆಯನ್ನು ವೃದ್ಧಿಸಲು ನಿರ್ಧರಿಸಿದ್ದಾರೆ ಎಂದು ಸಚಿವಾಲಯ ಹೇಳಿದೆ.
ಭಾರತ ಮತ್ತು ಅಮೇರಿಕಾದ ನಡುವೆ ಕೇವಲ ಪರಸ್ಪರ ಹಿತಾಸಕ್ತಿ ವಿಚಾರಗಳು ಮಾತ್ರವಲ್ಲದೇ ಪ್ರಾದೇಶಿಕ ಮತ್ತು ಜಾಗತಿಕ ಮಹತ್ವ ಪಡೆದ ವಿಚಾರಗಳ ಬಗ್ಗೆ ಜಂಟಿಯಾಗಿ ಕಾರ್ಯ ನಿರ್ವಹಿಸಲು ಹಾಗೂ ನಿಕಟ ಮತ್ತು ಬಲವಾದ ಸಂಬಂಧಗಳನ್ನು ಹೊಂದುವ ಕುರಿತು ಒತ್ತು ನೀಡಿದ್ದಾರೆ.
ರಕ್ಷಣೆ ಹಾಗೂ ಭದ್ರತೆಯ ಜೊತೆಗೆ ಶಕ್ತಿ ಮತ್ತು ಆರ್ಥಿಕತೆ ಹಾಗೂ ಅನೇಕ ವಲಯಗಳಲ್ಲಿ ಸಹಕಾರ ವೃದ್ಧಿಸಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ಸಚಿವಾಲಯ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.