ಚೆನ್ನೈ: ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರು ಎಐಎಡಿಎಂಕೆ ಶಾಸಕಾಂಗ ಪಕ್ಷದ ನಾಯಕ ಎಡಪ್ಪಾಡಿ ಪಳನಿಸ್ವಾಮಿ ಅವರಿಗೆ ಸರ್ಕಾರ ರಚಿಸುವಂತೆ ಆಹ್ವಾನ ನೀಡಿದ್ದು, ತಮಿಳುನಾಡಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಕುತೂಹಲಕ್ಕೆ ಬ್ರೇಕ್ ನೀಡಿದಂತಾಗಿದೆ.
15 ದಿನಗಳಲ್ಲಿ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲರು ಸೂಚಿಸಿರುವುದಾಗಿ ರಾಜಭವನದ ಪ್ರಕಟಣೆ ತಿಳಿಸಿದೆ. ಇಂದು ಸಂಜೆ ಪಳನಿಸ್ವಾಮಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಸಚಿವ ಡಿ.ಜಯಕುಮಾರ್ ತಿಳಿಸಿದ್ದಾರೆ.
ಈ ಬೆಳವಣಿಗೆ ಕುರಿತು ವಿ.ಕೆ.ಶಶಿಕಲಾ ಅವರ ಬೆಂಬಲಿಗರು ಹರ್ಷ ವ್ಯಕ್ತಪಡಿಸಿದ್ದು, ಪನ್ನೀರ ಸೆಲ್ವಂ ವಿರುದ್ಧ ಘೋಷಣೆಗಳನ್ನೂ ಕೂಗಿದ್ದಾರೆ ಎನ್ನಲಾಗಿದೆ.
ಪಳನಿಸ್ವಾಮಿ ತಮ್ಮ ಬೆಂಬಲಿಗರಾದ ಜಯಕುಮಾರ್, ಸೆಂಗೋಟ್ಟಿಯನ್, ಟಿ.ಟಿ.ದಿನಕರನ್, ಎಸ್.ಪಿ.ವೇಲುಮಣಿ ಮುಂತಾದವರೊಂದಿಗೆ ಬುಧವಾರ ರಾಜ್ಯಪಾಲರ ಭೇಟಿಗೆ ತೆರಳಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.