ನವದೆಹಲಿ: ಜನರು ಶೀಘ್ರದಲ್ಲೇ ಸ್ಮಾರ್ಟ್ಫೋನ್ ಆ್ಯಪ್ ಮೂಲಕ ತೆರಿಗೆ ಪಾವತಿಸಬಹುದು ಹಾಗೂ ಆದಾಯ ತೆರಿಗೆಯ ಮಾಹಿತಿಯನ್ನು ಟ್ರ್ಯಾಕ್ ಮಾಡಬಹುದು. ಜೊತೆ ಆಧಾರ್ ಪರಿಶೀಲನೆ ಸಹಾಯದಿಂದ ತಕ್ಷಣದಲ್ಲೇ ಪ್ಯಾನ್ ಕಾರ್ಡ್ ಪಡೆಯಬಹುದು.
ಅರ್ಜಿದಾರರು ಮೊಬೈಲ್ ಆಪ್ ಬಳಸಿ ಇ-ಕೆವೈಸಿ ದೃಢೀಕರಣ ಮೂಲಕ ಪ್ಯಾನ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಅನುಮತಿಸುವ ಆ್ಯಪ್ನ್ನು ಕೂಡ ಆದಾಯ ತೆರಿಗೆ ಇಲಾಖೆ ಅಭಿವೃದ್ಧಿಪಡಿಸಲಿದೆ.
ಈ ಆ್ಯಪ್ ಅಭಿವೃದ್ಧಿ ಪರಿಕಲ್ಪನೆ ಪ್ರಾಥಮಿಕ ಹಂತದಲ್ಲಿದೆ. ಈ ಆ್ಯಪ್ ಅರ್ಜಿದಾರರು ಆನ್ಲೈನ್ ಮೂಲಕ ತೆರಿಗೆ ಪಾವತಿಸಲು, ಆದಾಯ ತೆರಿಗೆ ಮಾಹಿತಿ ಟ್ರ್ಯಾಕ್ ಮಾಡಲು ಮತ್ತು ಪ್ಯಾನ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಸಹಕರಿಸಲಿದೆ. ಹಣಕಾಸು ಸಚಿವಾಲದ ಅನುಮೋದನೆ ಪಡೆದ ನಂತರ ಈ ಯೋಜನೆಯನ್ನು ಕೈಗೊಳ್ಳಲಾಗುವುದು ಎಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಆಧಾರ್ ಆಧಾರಿತ ಇ-ಕೆವೈಸಿ ಪ್ಯಾನ್ ಕಾರ್ಡ್ಗೆ ಅರ್ಜಿ ಸಲ್ಲಿಸುವ ವ್ಯಕ್ತಿಗಳು ಅಥವಾ ಘಟಕಗಳು ಹುಟ್ಟಿದ ದಿನಾಂಕ, ವಿಳಾಸ, ಹೆಬ್ಬಳಿನ ಗುರುತು, ಬಯೋಮೆಟ್ರಿಕ್ ಮಾಹಿತಿಗಳನ್ನು ಪರಿಶೀಲಿಸಲು ಅವಕಾಶ ಕಲ್ಪಿಸಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.