ಉತ್ತರ ಪ್ರದೇಶ: ಭಗವಾನ್ ಶ್ರೀಕೃಷ್ಣ ಇಂದಿನ ಗುಜರಾತ್ನ್ನು ತನ್ನ ಕರ್ಮಭೂಮಿಯನ್ನಾಗಿಸಿಕೊಂಡಿದ್ದ. ಅವನ ಆದರ್ಶದಲ್ಲೇ ನಾನು ಉತ್ತರಪ್ರದೇಶವನ್ನು ನನ್ನ ಕರ್ಮಭೂಮಿಯನ್ನಾಗಿ ಮಾಡಿಕೊಂಡಿರುವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆ ನಿಮಿತ್ತ ಆಯೋಜಿಸಿದ್ದ ಸಮಾವೇಶದಲ್ಲಿ ಮಾತನಾಡಿರುವ ಅವರು, ಮೂಲತಃ ಗುಜರಾತ್ನವನಾದರೂ ಉತ್ತರ ಪ್ರದೇಶದ ದತ್ತು ಪುತ್ರ ನಾನು ಎಂದು ಅವರು ಹೇಳಿದ್ದಾರೆ.
ಮುಲಾಯಂ ಸಿಂಗ್ ಹಾಗೂ ಅಖಿಲೇಶ್ ಯಾದವ್ ವಿರುದ್ಧ ಟೀಕಾಪ್ರಹಾರ ಮಾಡಿರುವ ಅವರು, ಇವರಿಬ್ಬರು ಜನ್ಮಭೂಮಿಯನ್ನು ಲೂಟಿ ಮಾಡಿದ್ದಾರೆ. ಆದರೆ ನಾನು ತಾಯಿಗೆ ಮೋಸ ಮಾಡುವ ವ್ಯಕ್ತಿಯಲ್ಲ ಎಂದು ಅವರು ಹೇಳಿದ್ದಾರೆ.
ಬುಧವಾರ ಕನೌಜ್ನಲ್ಲಿ ಮಾತನಾಡಿದ್ದ ಮೋದಿ ಅವರು, ಕಾಂಗ್ರೆಸ್ ಹಾಗೂ ಎಸ್ಪಿ ಅಪವಿತ್ರ ಮೈತ್ರಿ ಬಗ್ಗೆ ಕಿಡಿಕಾರಿದ್ದರು. ಮುಲಾಯಂ ಅವರನ್ನು ಕೊಲ್ಲಲು ಸಂಚು ರೂಪಿಸಿದವರ ತೊಡೆಯ ಮೇಲೆ ಅಖಿಲೇಶ್ ಕುಳಿತಿದ್ದಾರೆ ಎಂದೂ ಪ್ರಧಾನಿ ಮೋದಿ ಯಾದವ್ ಕುಟುಂಬವನ್ನು ಕುಟುಕಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.