ನವದೆಹಲಿ: ತ್ರಿವಳಿ ತಲಾಖ್ಗೆ ಸಂಬಂಧಿಸಿದ ಪ್ರಕರಣದಲ್ಲಿರುವ ಎಲ್ಲ ಪಕ್ಷಗಾರರು ತಮ್ಮ ಲಿಖಿತ ಹೇಳಿಕೆಗಳನ್ನು ಮಾ.30 ರೊಳಗೆ ಅಟಾರ್ನಿ ಜನರಲ್ ಅವರಿಗೆ ಸಲ್ಲಿಸತಕ್ಕದ್ದು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.
ಸರ್ವೋಚ್ಛ ನ್ಯಾಯಾಲಯ ತ್ರಿವಳಿ ತಲಾಖ್ ಪ್ರಕರಣವನ್ನು ತುಂಬಾ ಗಂಭೀರವಾಗಿ ಪರಿಗಣಿಸಿದ್ದು, ಕೂಲಂಕುಷವಾಗಿ ಪರಿಶೀಲಿಸಿ ನಿರ್ಣಯಿಸಲಿದೆ. ಆದರೆ ತ್ರಿವಳಿ ತಲಾಖ್ಗೆ ಸಂಬಂಧಿಸಿದ ಪ್ರಕರಣದ ವ್ಯಾಪ್ತಿಯಲ್ಲಿ ಸಮಾನ ನಾಗರಿಕ ಸಂಹಿತೆಗೆ ಸಂಬಂಧಿಸಿದ ವಿಷಯ ಬರುವುದಿಲ್ಲ ಎಂದು ಈ ಹಿಂದೆಯೇ ನ್ಯಾಯಾಲಯ ಸ್ಪಷ್ಟಪಡಿಸಿದೆ.
ತಲಾಖ್ ವಿವಾದವನ್ನು ಮಾನವ ಹಕ್ಕುಗಳಿಗೆ ಸಂಬಂಧಿಸಿದ ವಿವಾದವೆಂಬಂತೆ ಪರಿಗಣಿಸುವುದಾಗಿ ಸುಪ್ರೀಂ ಈ ಹಿಂದೆ ಹೇಳಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.