ನವದೆಹಲಿ: ವಿದೇಶಾಂಗ ಸಚಿವಾಲಯದ ವಕ್ತಾರರಾಗಿ ಸೇವೆ ಸಲ್ಲಿಸಿದ ವಿಕಾಸ ಸ್ವರೂಪ್ ಅವರನ್ನು ಕೆನಡಾದಲ್ಲಿ ಭಾರತೀಯ ರಾಯಭಾರಿ ಕಛೇರಿಯ ಹೈ ಕಮಿಷನರ್ ಆಗಿ ನೇಮಕ ಮಾಡಲಾಗಿದೆ.
ಸ್ವರೂಪ್ 1986 ರಲ್ಲಿ ಭಾರತೀಯ ವಿದೇಶಾಂಗ ಸೇವೆ ಸೇರಿದ್ದರು. ಈ ಹಿಂದೆ ಅವರು ಟರ್ಕಿ, ಯುನೈಟೆಡ್ ಸ್ಟೇಟ್ಸ್, ಇಥಿಯೊಪಿಯಾ, ಯುಕೆ, ಜಪಾನ ಮತ್ತು ದಕ್ಷಿಣ ಆಫ್ರಿಕಾದಲ್ಲಿ ಭಾರತೀಯ ರಾಯಭಾರಿಯಾಗಿ ಸೇವೆ ಸಲ್ಲಿಸಿದ್ದಾರೆ.
ಅವರು ತಮ್ಮ ಬರಹಗಾರಿಕೆಗೂ ಹೆಸರುವಾಸಿಯಾಗಿದ್ದಾರೆ. ಅವರ ಕೃತಿಯ ಪ್ರಶ್ನೋತ್ತರಗಳನ್ನು ಹಾಲಿವುಡ್ ಆಸ್ಕರ್ ವಿಜೇತ ಚಲನಚಿತ್ರ ’ಸ್ಲಂ ಡಾಗ್ ಮಿಲೇನಿಯರ್’ನಲ್ಲಿ ಬಳಸಿಕೊಳ್ಳಲಾಗಿದೆ.
ಏಪ್ರಿಲ್ 2015 ರಲ್ಲಿ ಸ್ವರೂಪ ವಿಕಾಸ್ ವಿದೇಶಾಂಗ ಸಚಿವಾಲಯದ ವಕ್ತಾರರಾಗಿ ನೇಮಕಗೊಂಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.