ನವದೆಹಲಿ: ಡೊನಾಲ್ಡ್ ಟ್ರಂಪ್ ಅಮೇರಿಕಾ ಅಧ್ಯಕ್ಷರಾಗಿ ಅಧಿಕಾರಕ್ಕೆ ಬಂದ ನಂತರ ಮೊದಲ ಬಾರಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಟ್ರಂಪ್ ಮೇ ತಿಂಗಳ ಆರಂಭದಲ್ಲಿ ಭೇಟಿಯಾಗುವ ಸಾಧ್ಯತೆ ಇದೆ. ಈ ವೇಳೆ ಪ್ರಧಾನಿ ಮೋದಿ ಹಾಗೂ ಟ್ರಂಪ್ ಎಚ್-1B ವೀಸಾ ಹಾಗೂ ಗ್ರೀನ್ ಕಾರ್ಡ್ ಸಂಖ್ಯೆ ಕಡಿತಗೊಳಿಸಿರುವ ಅಮೇರಿಕಾ ನೀತಿ ಕುರಿತು ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಧಾನಿ ಮೋದಿ ಹಾಗೂ ಟ್ರಂಪ್ G-20 ಶೃಂಗಸಭೆಯಲ್ಲಿ ಭೇಟಿ ಮಾಡುವ ಅವಕಾಶ ಹೊಂದಿದ್ದರೂ, ಅದಕ್ಕೂ ಮುನ್ನ ದ್ವಿಪಕ್ಷೀಯ ಮಾತುಕತೆ ನಡೆಸುವ ಯೋಜನೆ ಹೊಂದಿದ್ದಾರೆ.
ಈ ಹಿಂದೆ ಪ್ರಧಾನಿ ಮೋದಿ ಹಾಗೂ ಟ್ರಂಪ್ ದೂರವಾಣಿ ಮೂಲಕ ಸುದೀರ್ಘ ಮಾತುಕತೆ ನಡೆಸಿದ್ದು, ನಿಪುಣ ಟೆಕ್ಕಿಗಳು ಮತ್ತು ಸಾಫ್ಟ್ವೇರ್ ಇಂಜಿನಿಯರ್ಗಳಿಗೆ ಅಮೇರಿಕಾದಲ್ಲಿ ಉತ್ತಮ ಅವಕಾಶವಿದೆ ಎಂದು ಟ್ರಂಪ್ ಹೇಳಿದ್ದರು. ಇದೇ ವೇಳೆ ಭದ್ರತೆ, ರಕ್ಷಣಾ ಕ್ಷೇತ್ರ, ಆರ್ಥಿಕತೆ ಮತ್ತು ವ್ಯಾಪಾರದಲ್ಲಿ ದ್ವಿಪಕ್ಷೀಯ ಸಹಕಾರ ನಿರ್ವಹಿಸಲು ನಿರ್ಧರಿಸಿದ್ದರು.
ಭಾರತದ ಐಟಿ ವೃತ್ತಿಪರರಿಗೆ ನೀಡಲಾಗುವ ಎಚ್-1B ವೀಸಾ ಕಡಿತದ ಬಗ್ಗೆ ಈಗಾಗಲೇ ಮಾತುಕತೆ ನಡೆಸಲಾಗುತ್ತಿದ್ದು, ಇದು ಎರಡೂ ದೇಶಗಳ ಸ್ಥಾನಗಳನ್ನು ಅನುಸರಿಸಿ ಸಂಬಂಧಗಳಲ್ಲಿ ಬಿರುಕು ಬೀರದಂತೆ ನಡೆದುಕೊಳ್ಳಲು ಚಿಂತನೆ ನಡೆಸಲಾಗುತ್ತಿದೆ.
ಅಮೇರಿಕಾ ರಕ್ಷಣಾ ಕಾರ್ಯದರ್ಶಿ ಜೇಮ್ಸ್ ಮ್ಯಾಟಿಸ್ ಈ ಹಿಂದೆ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಜೊತೆ ಮಾತುಕತೆ ನಡೆಸಿದ್ದು, ಟ್ರಂಪ್ ಅಧ್ಯಕ್ಷತೆಯಡಿ ನೂತನ ಕಾರ್ಯದರ್ಶಿ ರೆಕ್ಸ್ ಟಿಲ್ಲರ್ಸನ್ ಇತ್ತೀಚೆಗೆ ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಜೊತೆ ಮಾತುಕತೆ ನಡೆಸಿದ್ದಾರೆ.
ಮುಂಬಯಿಯಲ್ಲಿ ಇತ್ತೀಚೆಗೆ ನಡೆದ ಭೌಗೋಳಿಕ ಆರ್ಥಿಕತೆ ಸಂಭಾಷಣೆ ವೇಳೆ ವಿದೇಶಾಂಗ ಕಾರ್ಯದರ್ಶಿ ಎಸ್. ಜಯ್ಶಂಕರ್ ಅವರು, ಡೊನಾಲ್ಡ್ ಟ್ರಂಪ್ ಅವರನ್ನು ವಿಶ್ವ ದುಷ್ಟನನ್ನಾಗಿಸಬಾರದು. ಬದಲಾಗಿ ಅವರ ಬಗ್ಗೆ ವಿಶ್ಲೇಷಿಸಬೇಕು ಎಂದು ಹೇಳಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.