ನವದೆಹಲಿ : ಕೇಂದ್ರೀಯ ಕಾಲೇಜ್ ಮತ್ತು ವಿಶ್ವವಿದ್ಯಾಲಯಗಳಲ್ಲಿ ಒದುತ್ತಿರುವ ವಿದ್ಯಾರ್ಥಿಗಳು ಕೇಂದ್ರ ಸರ್ಕಾರ ಒದಗಿಸುವ ವಿದ್ಯಾರ್ಥಿ ವೇತನದ ಯೋಜನೆಯ ಲಾಭ ಪಡೆಯಲು ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಹೊಂದಿರುವ ಪುರಾವೆಯನ್ನು ಒದಗಿಸಿ, ಆಧಾರ್ ಧೃಢೀಕರಣ ಮಾಡಿಕೊಳ್ಳುವಂತೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ತಿಳಿಸಿದೆ.
ಮಾನವ ಸಂಪನ್ಮೂಲ ನಿನ್ನೆ ದೆಹಲಿಯಲ್ಲಿ ಹೊರಡಿಸಿರುವ ಈ ಅಧಿಸೂಚನೆಯಲ್ಲಿ, ಆಧಾರ್ ಕಾರ್ಡ್ ಇಲ್ಲದೆಯೇ ವಿದ್ಯಾರ್ಥಿವೇತನವನ್ನು ಸ್ವೀಕರಿಸುತ್ತಿರುವವರು ಜೂನ್ 30ರ ಒಳಗಾಗಿ ಅರ್ಜಿ ಭರಿಸಿ ನೋಂದಣಿ ಮಾಡಿಕೊಳ್ಳಬೇಕು ಎಂದು ಹೇಳಿದೆ.
ಜಮ್ಮು ಮತ್ತು ಕಾಶ್ಮೀರ್ಗೆ ಈ ಅಧಿಸೂಚನೆ ಅನ್ವಯವಾಗುವುದಿಲ್ಲ.
ಇದೊಂದು ಪಾರದರ್ಶಕತೆಯ ನಿರ್ಧಾರವಾಗಿದ್ದು, ಫಲಾನುಭವಿಗಳು ಯಾವುದೇ ತಡೆ ಇಲ್ಲದೇ ಅನುಕೂಲಕರ ರೀತಿಯಲ್ಲಿ ಯೋಜನೆಯ ಲಾಭ ಪಡೆಯಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.