ನವದೆಹಲಿ: ಆಯ್ದ ರಾಜ್ಯಗಳ ಅಂಚೆ ಕಚೇರಿಗಳಲ್ಲಿ ಪಾಸ್ಪೋರ್ಟ್ಗಾಗಿ ಅರ್ಜಿ ಸಲ್ಲಿಸಲು ಮುಂಬರುವ ಮಾರ್ಚ್ನಿಂದ ಅವಕಾಶ ನೀಡಲಾಗುವುದು ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ರಾಜಸ್ಥಾನ, ಪ.ಬಂಗಾಲ, ತಮಿಳುನಾಡು, ಕರ್ನಾಟಕ, ಜಾರ್ಖಂಡ್ ಹಾಗೂ ಇನ್ನು ಕೆಲವು ರಾಜ್ಯಗಳಲ್ಲಿ ಈ ಯೋಜನೆಯ ಮೊದಲ ಹಂತ ಆರಂಭಿಸಲಾಗುವುದು ಎಂದು ತಿಳಿಸಲಾಗಿದೆ.
ಈಗಾಗಲೇ ದೇಶದಾದ್ಯಂತ ಒಟ್ಟು 89 ಪಾಸ್ಪೋರ್ಟ್ ಸೇವಾ ಕೇಂದ್ರಗಳಿವೆ. 2016 ರಲ್ಲಿ 1.15 ಕೋಟಿ ಪಾಸ್ಪೋರ್ಟ್ ನೀಡುವಿಕೆ ಹಾಗೂ ಇದಕ್ಕೆ ಸಂಬಂಧಿಸಿದ ಇನ್ನಿತರ ಸೇವೆಗಳನ್ನು ಒದಗಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ರಾಜಸ್ಥಾನದಲ್ಲಿ ಕೋಟಾ, ಜೈಸಲ್ಮೇರ್ ಬಿಕಾನೇರ್, ಜುಂಝುಣು ಮತ್ತು ಜಲ್ವಾರ್, ಪಶ್ಚಿಮ ಬಂಗಾಲದಲ್ಲಿ ಅಸಾನ್ಸೋಲ್, ನಡಿಯಾ ಹಾಗೂ ಇನ್ನಿತರೆಡೆ ಪಾಸ್ಪೋರ್ಟ್ ಸೇವೆ ದೊರಕಲಿದೆ. ಕರ್ನಾಟಕದಲ್ಲಿ ಬೆಳಗಾವಿ, ದಾವಣೆಗೆರೆ, ಹಾಸನ, ಮೈಸೂರು ಹಾಗೂ ಕಲಬುರಗಿಯಲ್ಲಿ ಈ ಸೇವೆ ಲಭ್ಯವಿರಲಿದೆ.
ಮಾ.31ರೊಳಗಾಗಿ ನೂತನ ಯೋಜನೆಯಾದ ಅಂಚೇ ಕಚೇರಿಯಲ್ಲಿ ಪಾಸ್ಪೋರ್ಟ್ ಸೌಲಭ್ಯ ದೊರಕುವಂತೆ ಮಾಡಲಾಗುವುದು ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಟ್ವೀಟ್ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.