ನವದೆಹಲಿ: ಕೇಂದ್ರ ಹಣಕಾಸು ಸಚಿವಾಲಯ ಸರ್ಕಾರಿ ಸೇವೆಗಳ ಸಹಾಯಕ ಖಾತೆ ಅಧಿಕಾರಿ ( Assistant Accounts Officer) ಹುದ್ದೆಯ 643 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು ಸಾರ್ವತ್ರಿಕ ಕೇಂದ್ರ ಸೇವೆಗಳ ಗುಂಪು ‘ಬಿ’ಯ ಗೆಜೆಟ್ ಹುದ್ದೆಯಾಗಿದ್ದು, ಒಟ್ಟು 643 ಹುದ್ದೆಗಳು ಖಾಲಿ ಇವೆ. ರಾಜ್ಯ ಮಟ್ಟದಲ್ಲಿ ಇರುವ ಖಾಲಿ ಹುದ್ದೆಗಳ ವಿವರಗಳು ಸಚವಾಲಯದ ಸುತ್ತೋಲೆಯಲ್ಲಿ ತಿಳಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ದೆಹಲಿಯಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಖಾಲಿ ಹುದ್ದೆಗಳಿದ್ದು, ಸೇವೆಯ ನಿಯೋಜನೆಯ ಆರಂಭಿಕ ಅವಧಿ 3 ವರ್ಷ ಇರಲಿದೆ. ಇದನ್ನು ವಿಸ್ತರಿಸುವ ಅಥವಾ ಮೊಟಕುಗೊಳಿಸುವ ಸಾಧ್ಯತೆ ಇದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೂಚನೆಗಳ ಅನುಸಾರ ಅರ್ಜಿ ಸಲ್ಲಿಸುವಂತೆ ಸಚಿವಾಲಯ ತಿಳಿಸಿದೆ.
ಕೇಂದ್ರ, ರಾಜ್ಯ ಸರ್ಕಾರ ಅಥವಾ ಖಾಸಗಿ ವಲಯದ ಖಾತೆ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿರುವ ಅಭ್ಯಥಿಘಲು ಅರ್ಜಿ ಸಲ್ಲಿಸಬಹುದು. ಸಹಾಯಕ ಖಾತೆ ಅಧಿಕಾರಿ (ಸಿವಿಲ್) ಅಥವಾ ಎಸ್ಎಎಸ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು. 7ನೇ ವೇತನ ಆಯೋಗದ 8ನೇ ಲೆವೆಲ್ನ (ಪೂರ್ವ ಪರಿಷ್ಕೃತ) ಅಡಿಯಲ್ಲಿ 9300-34,800 ರೂ ವೇತನ ಹಾಗೂ 4800 ಗ್ರೇಡ್ ಪೇ ನೀಡಲಾಗುವುದು ಎಂದು ಸಚಿವಾಲಯ ತಿಳಿಸಿದೆ.
ಅಭ್ಯರ್ಥಿಗಳು ಜಾಹೀರಾತು ಪ್ರಕಟಣೆಯ ದಿನಾಂಕದಿಂದ 30 ದಿನಗಳ ಒಳಗೆ ಅರ್ಜಿ ಸಲ್ಲಿಸುವಂತೆ ಸಚಿವಾಲಯ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.