ಛತ್ತೀಸ್ಗಢ : ಛತ್ತೀಸ್ಗಢದಲ್ಲಿ ನಡೆದ ಎನ್ಕೌಂಟರ್ನಲ್ಲಿ 7 ನಕ್ಸಲರನ್ನು ಹತ್ಯೆಗೈಯಲಾಗಿದೆ.
ಛತ್ತೀಸ್ಗಢದ ನಾರಾಯಪುರ ಜಿಲ್ಲೆಯ ಪುಷ್ಪಲ್ ಹಳ್ಳಿಯ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆ ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿಯಲ್ಲಿ 7 ನಕ್ಸಲರನ್ನು ಹತ್ಯೆಗೈಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಡಿಸ್ಟ್ರಿಕ್ಟ್ ರಿಸರ್ವ್ ಗ್ರೂಪ್ (DRG) ಮತ್ತು ಡಿಸ್ಟ್ರಿಕ್ಟ್ ಫೋರ್ಸ್ ಜಂಟಿ ಕಾರ್ಯಾಚರಣೆ ಕೈಗೊಂಡಿದ್ದು, ದಂತೇವಾಡ ಜಿಲ್ಲೆಯ ಬಸ್ರೂರು ಪೊಲೀಸ್ ಠಾಣೆಯಿಂದ ಒಳನುಸುಳುವಿಕೆ ನಿಗ್ರಹ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು. ಎರಡು ಜಿಲ್ಲೆಗಳ ಗಡಿಯಲ್ಲಿರುವ ಅರಣ್ಯ ಪ್ರದೇಶದಲ್ಲಿ ಈ ಕಾರ್ಯಾಚರಣೆಯನ್ನು ಕೈಗೊಂಡಿದ್ದು, ಪುಷ್ಪಲ್ ಹಳ್ಳಿಯ ಬಳಿ ನಕ್ಸಲರ ತಂಡ ಗುಂಡಿನ ಮಳೆಗರೆಯಲಾರಂಭಿಸಿದರು. ಪ್ರತ್ಯುತ್ತರವಾಗಿ ಭದ್ರತಾ ಪಡೆಯವರೂ ಗುಂಡಿನ ಮಳೆಗರೆದರು. ಗುಂಡಿನ ಶಬ್ದ ನಿಂತ ನಂತರ ಅರಣ್ಯ ಪ್ರದೇಶದಲ್ಲಿ ಹುಡುಕಾಡಿದ ಭದ್ರತಾ ಪಡೆಗಳಿಗೆ 7 ನಕ್ಸಲರ ಮೃತ ದೇಹಗಳು ಪತ್ತೆಯಾದವು. ಅವರ ಬಳಿಯಿಂದ ರೈಫಲ್ ಮತ್ತಿನ್ನಿತರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾವೋವಾದಿ ವಿರೋಧಿ ಕಾರ್ಯಾಚರಣೆಯ ವಿಶೇಷ ಡೆರೆಕ್ಟರ್ ಜನರಲ್ ಆಫ್ ಪೊಲೀಸ್ ಡಿ. ಎಂ. ಅವಸ್ಥಿ ಅವರು ಹೇಳಿದ್ದಾರೆ ಎನ್ನಲಾಗಿದೆ.
ಅರಣ್ಯ ಪ್ರದೇಶದಲ್ಲಿರುವ ಕ್ಯಾಂಪ್ಗಳನ್ನೂ ಶೋಧಿಸಿ ಮತ್ತಷ್ಟು ವಿಷಯಗಳನ್ನು ತಿಳಿಯಲಾಗುವುದು ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.