ನವದೆಹಲಿ: ಭಾರತ ಹಾಗೂ ದಕ್ಷಿಣ ಆಫ್ರಿಕಾ ಮಹಿಳಾ ಕ್ರಿಕೆಟ್ ತಂಡಗಳ ನಡುವೆ ನಡೆದ ಐಸಿಸಿ ವಿಶ್ವ ಕಪ್ ಕ್ವಾಲಿಫೈಯರ್ನ ಫೈನಲ್ ಪಂದ್ಯದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ತಂಡವನ್ನು ರೋಮಾಂಚಕ ರೀತಿಯಲ್ಲಿ ಮಣಿಸಿದೆ.
ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ಮಹಿಳಾ ತಂಡ ನಿಗದಿತ 50 ಓವರ್ಗಳಲ್ಲಿ 244 ರನ್ ಬಾರಿಸಿತು. ಇದಕ್ಕುತ್ತರವಾಗಿ ಭಾರತೀಯ ಮಹಿಳಾ ತಂಡ ತನ್ನ ಕೊನೆಯ ಓವರ್ನಲ್ಲಿ ಹರ್ಮೀತ್ ಕೌರ್ ಅವರ ಸಿಕ್ಸರ್ ನೆರವಿನಿಂದ ಜಯ ಸಾಧಿಸಿದೆ.
ಭಾರತದ ಪರ ರಾಜೇಶ್ವರಿ ಗಾಯಕ್ವಾಡ್ 3 ವಿಕೆಟ್ ಪಡೆದರೆ ಶಿಖಾ 2 ವಿಕೆಟ್ ಪಡೆದರು. ಏಕ್ತಾ, ಪೂನಂ ಯಾದವ್ ಹಾಗೂ ದೀಪ್ತಿ ಶರ್ಮಾ ತಲಾ 1 ವಿಕೆಟ್ ಪಡೆದರು.
ಈ ಮೂಲಕ ಭಾರತ ಐಸಿಸಿ ವಿಶ್ವ ಕಪ್ಗೆ ಅರ್ಹತೆ ಪಡೆದಿದ್ದು, ಇದಕ್ಕೂ ಮುನ್ನ ಸೂಪರ್ ಸಿಕ್ಸ್ ಹಂತದ ಅಂತಿಮ ಸುತ್ತಿನಲ್ಲಿ ಆಡಲಿದೆ. ಭಾರತ ಈವರೆಗಿನ ಗ್ರೂಪ್ ಹಂತ ಹಾಗೂ ಸೂಪರ್ ಸಿಕ್ಸ್ ಹಂತದ ಎಲ್ಲ ಪಂದ್ಯಗಳನ್ನು ಗೆದ್ದು ಅಜೇಯವಾಗಿ ಉಳಿದಿದೆ.
ವಿಶ್ವ ಕಪ್ನಲ್ಲಿ ಭಾರತ, ದಕ್ಷಿಣ ಆಫ್ರಿಕಾ, ಪಾಕಿಸ್ಥಾನ, ಶ್ರೀಲಂಕಾ, ನ್ಯೂಜಿಲ್ಯಾಂಡ್, ಇಂಗ್ಲೆಂಡ್, ಆಸ್ಟ್ರೇಲಿಯಾ ಹಾಗೂ ವೆಸ್ಟ್ ಇಂಡಿಸ್ ತಂಡಗಳು ಸೆಣಸಲಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.