ನವದೆಹಲಿ: ಉತ್ತರಪ್ರದೇಶ ಚುನಾವಣೆ ಬಿಜೆಪಿಗೆ ಅತಿ ಮಹತ್ವದ ಸ್ಪರ್ಧೆಯಾಗಿದ್ದು, ಇದರಲ್ಲಿ ಪಕ್ಷ ಬಹುಮತ ಪಡೆಯುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿರುವ ಕೇಂದ್ರ ಗೃಹ ಸಚಿವ ರಾಜ್ನಾಥ್ ಸಿಂಗ್, ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ನಡುವೆ ಮೈತ್ರಿ ಹೊಂದದೇ ಇದ್ದಲ್ಲಿ ಬಿಜೆಪಿ 300ಕ್ಕೂ ಅಧಿಕ ಸ್ಥಾನಗಳನ್ನು ಪಡೆಯುತ್ತಿತ್ತು ಎಂದು ಹೇಳಿದ್ದಾರೆ.
ಆದರೆ ಕಾನೂನು ಅವ್ಯವಸ್ಥೆ ಕುರಿತು ಅಖೀಲೇಶ್ ಯಾದವ್ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿವೆ. ಒಂದು ಪ್ರಮುಖ ನ್ಯೂನತೆಯಂತೆ ಮುಖ್ಯಮಂತ್ರಿಯಾಗಿ ಅಖಿಲೇಶ್ ಯಾದವ್ ರಾಜ್ಯದಲ್ಲಿ ಅಭಿವೃದ್ಧಿ ಕುರಿತು ಭರವಸೆ ನೀಡುತ್ತಿದ್ದರೂ ಅದು ಕಂಡು ಬಂದಿಲ್ಲ. ಅವರು ಕೇವಲ ಏಕ ಮಾರ್ಗದ ಹೆದ್ದಾರಿ ಬಗ್ಗೆ ಮಾತನಾಡುತ್ತಿರುವುದು ಸರಿಯಲ್ಲ ಎಂದು ರಾಜ್ನಾಥ್ ಸಿಂಗ್ ಹೇಳಿದ್ದಾರೆ.
ಇದೇ ವೇಳೆ ತನ್ನ ಧಾರ್ಮಿಕ ಜೀವನದಲ್ಲಿ ಧರ್ಮದ ಆಧಾರದಲ್ಲಿ ರಾಕೀಯವನ್ನು ನಡೆಸಿಲ್ಲ ಎಂದು ಹೇಳಿದ ಸಿಂಗ್, ಯಾವುದೇ ಜಾತಿ ಅಥವಾ ಪಂಗಡಕ್ಕೆ ಪ್ರತ್ಯೇಕ ಸ್ಥಾನಮಾನ ನೀಡಬಾರದು. ಏಕೆಂದರೆ ಇದನ್ನು ಓಟ್ ಬ್ಯಾಂಕ್ ಎಂದು ಪರಿಗಣಿಸಲಾಗುತ್ತದೆ ಎಂದು ಹೇಳಿದ್ದಾರೆ.
ಇದೇ ವೇಳೆ ಉತ್ತರ ಪ್ರದೇಶದಲ್ಲಿ ಪ್ರಧಾನಿ ಮೋದಿ ಅವರ ಭಾಷಣದ ಕುರಿತು ಮಾತನಾಡಿದ ಅವರು, ಯಾರೂ ಧರ್ಮ ಅಥವಾ ಜಾತಿಯ ಆಧಾರದಲ್ಲಿ ತಾರತಮ್ಯ ಎದುರಿಸಬಾರದು ಎಂದು ಹೇಳಿರುವುದಾಗಿ ರಾಜ್ನಾಥ್ ಸಿಂಗ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.