ನವದೆಹಲಿ: ಕೇಂದ್ರ ನಗರಾಭಿವೃದ್ಧಿ ಸಚಿವಾಲಯವು ಸ್ವಚ್ಛ ಭಾರತ್ ಅಭಿಯಾನದ ಅಡಿಯಲ್ಲಿ ಜನರು ವೈಜ್ಞಾನಿಕ ಸಂಸ್ಕರಣೆಗಾಗಿ ಅಡುಗೆ ತ್ಯಾಜ್ಯವನ್ನು ಗೊಬ್ಬರವನ್ನಾಗಿ ಪರಿವರ್ತಿಸಲು ಪ್ರೋತ್ಸಾಹಿಸುವ ಗುರಿಯೊಂದಿಗೆ ಹೊಸ ಅಭಿಯಾನ ಆರಂಭಿಸಿದೆ.
ಬಾಲಿವುಡ್ನ ಬಿಗ್-ಬಿ ಅಮಿತಾಭ್ ಬಚ್ಚನ್ ಅವರು ಇದರ ರಾಯಭಾರಿಯಾಗಿದ್ದು, ‘ಕಾಂಪೋಸ್ಟ್ ಬನಾವೋ, ಕಾಂಪೋಸ್ಟ್ ಅಪ್ನಾವೋ’ ಹೆಸರಿನಲ್ಲಿ ಈ ಅಭಿಯಾನ ಆರಂಭಿಸಲಾಗಿದೆ.
ಘನ ತ್ಯಾಜ್ಯದ ವೈಜ್ಞಾನಿಕ ಸಂಸ್ಕರಣೆ ಸ್ವಚ್ಛ ಭಾರತ ಅಭಿಯಾನದ ಅಡಿಯಲ್ಲಿ ಕೈಗೊಳ್ಳಲಾಗುವ ಪ್ರಮುಖ ಉಪಕ್ರಮವಾಗಿದೆ ಎಂದು ನಗರಾಭಿವೃದ್ಧಿ ಸಚಿವಾಲಯದ ಜಂಟಿ ಕಾರ್ಯದರ್ಶಿ ಪ್ರವೀಣ್ ಪ್ರಕಾಶ್ ಹೇಳಿದ್ದಾರೆ.
ಜೈವಿಕ ತ್ಯಾಜ್ಯವನ್ನು ಕಾಂಪೋಸ್ಟ್ ಗೊಬ್ಬರವನ್ನಾಗಿ ಪರಿವರ್ತಿಸಿ ಬಳಸುವಂತೆ ಪ್ರೋತ್ಸಾಹಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.