ಅಲಹಾಬಾದ್(ಉ.ಪ್ರದೇಶ): ಜಾಹೀರಾತಿನಲ್ಲೇ ಮುಳುಗಿದ್ದು ಅಖಿಲೇಶ್ ಯಾದವ್ ಸಾಧನೆ ಹೊರತು ರಾಜ್ಯಕ್ಕೆ ಅವರ ಕೊಡುಗೆ ಬೇರೇನೂ ಇಲ್ಲ ಎಂದು ಬಿಜೆಪಿ ಮುಖಂಡ ಕೇಶವ ಪ್ರಸಾದ್ ಮೌರ್ಯ ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ಇಂದು ಆರಂಭವಾದ 4ನೇ ಹಂತದ ಮತದಾನ ಪ್ರಕ್ರಿಯೆಯಲ್ಲಿ ತಮ್ಮ ಹಕ್ಕನ್ನು ಚಲಾಯಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, ಪ್ರಚಾರಕ್ಕೇ ತಮ್ಮನ್ನು ಸೀಮಿತಗೊಳಿಸಿಕೊಂಡಿರುವ ಅಖಿಲೇಶ್ ಅವರು ಯಾವುದೇ ಜನಪರ, ಅಭಿವೃದ್ಧಿ ಕಾರ್ಯ ಮಾಡಿಲ್ಲ ಎಂದು ಆರೋಪಿಸಿದರು.
2017 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸುವ ವಿಶ್ವಾಸವಿದೆ ಎಂದಿರುವ ಅವರು, ರೈತರು, ಯುವಜನತೆ ಹಾಗೂ ಬಡವರ್ಗದವರಾದಿಯಾಗಿ ಎಲ್ಲರೂ ನಮ್ಮ ಗೆಲುವಿಗೆ ಕಾರಣರಾಗಲಿದ್ದಾರೆ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.