ನವದೆಹಲಿ: ಅಂಧರ ಟಿ-20 ವಿಶ್ವಕಪ್ ವಿಜೇತ ತಂಡದ ಪ್ರತಿಯೊಬ್ಬ ಆಟಗಾರನಿಗೆ 5 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ಕ್ರೀಡಾ ಸಚಿವ ವಿಜಯ್ ಗೋಯಲ್ ಹೇಳಿದ್ದಾರೆ.
ದೆಹಲಿ ಗ್ರಾಮೀಣ ಖೇಲ್ ಮಹೊತ್ಸವ್ ಅನಾವರಣಗೊಳಿಸಿ ಮಾತನಾಡಿದ ವಿಜಯ್ ಗೋಯಲ್, ದಿವ್ಯಾಂಗ ಕ್ರೀಡಾಪಟುಗಳನ್ನು ಬೆಂಬಲಿಸಲು ಕೇಂದ್ರ ಬದ್ಧವಾಗಿದೆ ಟಿ-20 ವಿಶ್ವಕಪ್ ವಿಜೇತ ತಂಡದ ಪ್ರತಿಯೊಬ್ಬ ಆಟಗಾರರು 5 ಲಕ್ಷ ರೂ. ಬಹುಮಾನ ಪಡೆಯಲಿದ್ದಾರೆ ಎಂದು ಹೇಳಿದ್ದಾರೆ.
ದೇಶೀಯ ಕ್ರೀಡೆಗಳನ್ನು ಪ್ರೋತ್ಸಾಹಿಸುವ ಮತ್ತು ಗ್ರಾಮೀಣ ಪ್ರತಿಭೆಗಳನ್ನು ಹೊರತರುವ ಉದ್ದೇಶದಿಂದ ಕ್ರೀಡಾ ಸಚಿವಾಲಯ ದೆಹಲಿ ಗ್ರಾಮೀಣ ಖೇಲ್ ಮಹೋತ್ಸವ, ಬಹು-ಕ್ರೀಡಾ ಚಾಂಪಿಯನ್ಶಿಪ್ ಏರ್ಪಡಿಸಿದೆ. ಇದು ಮಾರ್ಚ್ 25ರಿಂದ 31ರ ವರೆಗೆ ನಡೆಯಲಿದೆ.
ಆರಂಭದಲ್ಲಿ ಬ್ಲಾಕ್ ಮಟ್ಟದಲ್ಲಿ ಸ್ಪರ್ಧೆ ನಡೆಯಲಿದ್ದು, ನಂತರ ವಿವಿಧ ಬ್ಲಾಕ್ಗಳ ನಡುವೆ ಸ್ಪರ್ಧೆ ನಡೆಯಲಿವೆ. ಅಂತಿಮವಾಗಿ ಫೈನಲ್ ಪಂದ್ಯ ನಡೆಯಲಿದೆ ಎಂದು ಗೋಯಲ್ ಹೇಳಿದ್ದಾರೆ.
ಕ್ರೀಡೆಗಳ ಉದ್ಘಾಟನಾ ಸಮಾರಂಭ ಮಾ.28ರಂದು ನಡೆಯಲಿದ್ದು, ಮಾ.31ರಂದು ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.