ಮಂಗಳೂರು : ವಿಶ್ವ ಹಿಂದು ಪರಿಷತ್ ಹಾಗೂ ಹಿಂದು ಜಾಗರಣ ವೇದಿಕೆ ಮತ್ತು ಇತರ ಹಿಂದು ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಕೇರಳದಲ್ಲಿ ನಡೆಯುತ್ತಿರುವ ಹಿಂದು ಹಾಗೂ ಮುಗ್ಧರ ಹತ್ಯೆಯನ್ನು ತಡೆಯಲು ವಿಫಲವಾದ ಕೇರಳ ಮುಖ್ಯಮಂತ್ರಿ ಸಿಪಿಎಂ ನೇತಾರ ಪಿಣರಾಯಿ ವಿಜಯನ್ ಮಂಗಳೂರಿನಲ್ಲಿ ನಡೆಯುವ ಕೋಮು ಸೌಹಾರ್ದ ಸಮಾವೇಶದಲ್ಲಿ ಭಾಗವಹಿಸುವುದನ್ನು ವಿರೋಧಿಸಿ ಇಂದು (ಫೆ. 24) ಬೃಹತ್ ಪ್ರತಿಭಟನಾ ಮೆರವಣಿಗೆ ಮತ್ತು ಸಭೆಯನ್ನು ಏರ್ಪಡಿಸಲಾಗಿದೆ.
ಜ್ಯೋತಿ ವೃತ್ತದಿಂದ ಕೇಂದ್ರ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಆರಂಭಿಸಲಾಗಿದ್ದು, ಕೇಂದ್ರ ಮೈದಾನದಲ್ಲಿ ಸಮಾಪನಗೊಳ್ಳಲಿದೆ. ಅಲ್ಲಿ ಸಭೆಯನ್ನು ಆಯೋಜಿಸಲಾಗಿದ್ದು, ವಿವಿಧ ಗಣ್ಯರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಹಿಂದೂ ಸಂಘಟನೆಗಳ ಅಸಂಖ್ಯ ಜನರು, ಗಣ್ಯರು ಪಾಲ್ಗೊಂಡಿದ್ದರು.
ಹತ್ತಾರು ಹಿಂದು ಕಾರ್ಯಕರ್ತರ ಹತ್ಯೆಗೆ ಕಾರಣಕರ್ತರಾದ ರಕ್ತಸಿಕ್ತ ಅಧ್ಯಾಯದ ಪಕ್ಷದ ನೇತಾರ ಹಾಗೂ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳೂರು ಭೇಟಿಗೆ ವಿರೋಧ ವ್ಯಕ್ತಪಡಿಸಿ ವಿಶ್ವ ಹಿಂದು ಪರಿಷತ್, ಬಜರಂಗದಳ ಮತ್ತು ಹಿಂದೂ ಜಾಗರಣ ವೇದಿಕೆಯಿಂದ ಫೆ. 25 ರಂದು ಮಂಗಳೂರು ಬಂದ್ಗೆ ಕರೆ ನೀಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.