ಐಜ್ವಾಲ್: ಶಾಸಕರೋರ್ವರು ಶಸ್ತ್ರ ಚಿಕಿತ್ಸೆ ಮಾಡುವ ಮೂಲಕ ಮಹಿಳೆಯೊಬ್ಬರ ಪ್ರಾಣ ಉಳಿಸಿ ಮಾನವೀಯತೆ ಮೆರೆದ ಘಟನೆ ನಡೆದಿದೆ.
ಶಾಸಕ ಕೆ.ಬೈಚುವಾ ಕಾರ್ಯಕ್ರಮ ನಿಮಿತ್ತ ಗ್ರಾಮವೊಂದಕ್ಕೆ ತೆರಳಿದ್ದರು. ಆಗ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅಲ್ಲಿ ವೈದ್ಯರೇ ಇರಲಿಲ್ಲ. ಈ ವಿಷಯ ತಿಳಿದ ಶಾಸಕರು ತಕ್ಷಣ ಆಸ್ಪತ್ರೆಗೆ ತೆರಳಿ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಿದ್ದಾರೆ.
ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮಹಿಳೆಯ ಪ್ರಾಣ ಉಳಿಸಿದ್ದು ಎಲ್ಲೆಡೆ ಪ್ರಶಂಸೆಗೆ ಪಾತ್ರವಾಗಿದೆ. ಶಾಸಕ ಬೈಚುವಾ ಅವರು ಸೈಹಾ ಜಿಲ್ಲಾ ಆಸ್ಪತ್ರೆಯಲ್ಲಿ ಈ ಮೊದಲು ಸರ್ಜನ್ ಆಗಿ ಕಾರ್ಯ ನಿರ್ವಹಿಸಿದ್ದರು.
ಬೈಚುವಾ ಅವರು 1991 ರಲ್ಲಿ ಇಂಫಾಲ್ನ ರೀಜನಲ್ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡಿದ್ದಾರೆ. ಅವರು ರಾಜಕೀಯಕ್ಕೆ ಪಾದಾರ್ಪಣೆ ಮಾಡುವ ಮುನ್ನ 20 ವರ್ಷ ವೈದ್ಯಕೀಯ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.
ನನ್ನ ಅನುಭವದಲ್ಲಿ ನೂರಾರು ಶಸ್ತ್ರಚಿಕಿತ್ಸೆಗಳನ್ನು ಮಾಡಿರುವೆ. ಎಂಎಲ್ಎ ಆಗಿ ಆಯ್ಕೆಯಾದ ಮೇಲೆ ಕೊನೆಯದಾಗಿ 2013 ರ ಡಿಸೆಂಬರ್ನಲ್ಲಿ ಶಸ್ತ್ರ ಚಿಕಿತ್ಸೆ ಮಾಡಿರುವುದಾಗಿ ಅವರು ಹಿಂದುಸ್ಥಾನ್ ಟೈಮ್ಸ್ಗೆ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.