ನವದೆಹಲಿ: ಭಾರತದ ಸೇನಾಬಲ ಹೆಚ್ಚಿಸಲು ಇಸ್ರೇಲ್ ಜೊತೆ 17,000 ಕೋಟಿ ರೂ. ವೆಚ್ಚದಲ್ಲಿ ಜಂಟಿಯಾಗಿ ಅಭಿವೃದ್ಧಿಪಡಿಸಲಾಗುವ ಮಧ್ಯಮ ಶ್ರೇಣಿಯ ಸರ್ಫೇಸ್-ಟು-ಏರ್ ಕ್ಷಿಪಣಿ (ಎಂಆರ್-ಸ್ಯಾಮ್) ಒಪ್ಪಂದಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಒಪ್ಪಂದಕ್ಕೆ ಅನುಮೋದನೆ ನೀಡಿದೆ.
ಭಾರತದ ರಕ್ಞಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ಹಾಗೂ ಇಸ್ರೇಲಿ ಏರ್ಕ್ರಾಫ್ಟ್ ಇಂಡಸ್ಟ್ರಿ (ಐಎಐ) ಈ ಯೋಜನೆಯನ್ನು ಅನುಷ್ಠಾನಕ್ಕೆ ತರಲಿದೆ.
ಎಂಆರ್-ಸ್ಯಾಮ್ ದೂರಗಾಮಿ ಕ್ಷಿಪಣಿ 70 ಕಿ.ಮೀ. ವ್ಯಾಪ್ತಿಯನ್ನು ಹೊಂದಿದೆ. ಈ ಒಪ್ಪಂದದ ಅಡಿಯಲ್ಲಿ ದಾಳಿ ನಡೆಸುವ 40 ಫೈರಿಂಗ್ ಘಟಕಗಳು ಹಾಗೂ 200 ಕ್ಷಿಪಣಿಗಳ ತಯಾರಿಕೆಯನ್ನು ಭಾರತ ಎದುರು ನೋಡುತ್ತಿದೆ.
ಭಾರತ ಇಸ್ರೇಲ್ನ ಮಿಲಿಟರಿ ಹಾರ್ಡ್ವೇರ್, ವಿವಿಧ ಶಸ್ತ್ರಾಸ್ತ್ರಗಳು, ಕ್ಷಿಪಣಿಗಳು ಮತ್ತು ಮಾನವರಹಿತ ವೈಮಾನಿಕ ವಾಹಕಗಳ ಅತಿ ದೊಡ್ಡ ಖರೀದಿದಾರ ರಾಷ್ಟ್ರವಾಗಿದೆ.
2017 ಎರಡೂ ರಾಷ್ಟ್ರಗಳ ರಾಜತಾಂತ್ರಿಕ ಸಂಬಂಧಗಳ 25ನೇ ವರ್ಷವನ್ನು ಗುರುತಿಸುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.