ರಾಜಕೋಟ್: ಗುಜರಾತ್ನ ಛೋಟಿಲಾ ಮಂದಿರದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಭಯೋತ್ಪಾದಕ ಸಂಘಟನೆಯ ನಾಸಿಮ್ ಹಾಗೂ ನಿತಿನ್ ಎಂಬಿಬ್ಬರನ್ನು ಉಗ್ರ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆ.
2 ವರ್ಷಗಳ ಹಿಂದೆ ಇಸಿಸ್ ಉಗ್ರರಿಂದ ಅಪಹರಣಕ್ಕೊಳಗಾಗಿ ಉಗ್ರರ ಕಪಿಮುಷ್ಠಿಯಲ್ಲಿ ಬಂಧಿಯಾಗಿದ್ದ ಡಾ.ರಾಮಮೂರ್ತಿ ಅವರು ಇತ್ತೀಚೆಗೆ ಸ್ಫೋಟಕ ಮಾಹಿತಿಗಳನ್ನು ಬಹಿರಂಗಪಡಿಸಿದ್ದರು.
ಉಗ್ರ ಸಂಘಟನೆಯ ಸಂಚನ್ನು ಮತ್ತು ಅಲ್ಲಿ ತಾವು ಅನುಭವಿಸಿದ ನೋವನ್ನು ವಿವರವಾಗಿ ಬಿಟ್ಟಿಟ್ಟಿದ್ದರು. ಇಸ್ಲಾಮಿಕ್ ಸ್ಟೇಟ್ ಉಗ್ರರಿಗೆ ಭಾರತದ ಕುರಿತಂತೆ ಸಾಕಷ್ಟು ಮಾಹಿತಿ ತಿಳಿದಿದೆ.
ಭಾರತದ ರಾಜಕೀಯ, ಧಾರ್ಮಿಕ ಮತ್ತು ಸಾಮಾಜಿಕ ವಾಸ್ತವಿಕತೆಯ ಅರಿವನ್ನು ಹೊಂದಿದ್ದು, ವಿಧ್ವಂಸಕ ಕೃತ್ಯಗಳಿಗೆ ಸಾಕಷ್ಟು ಸಂಚು ರೂಪಿಸುತ್ತಾರೆ ಎಂದು ಅವರು ಹೇಳಿದ್ದರು.
ಉಗ್ರ ನಿಗ್ರಹ ದಳದ ಕಾರ್ಯಾಚರಣೆ ಸಫಲತೆ ಪರಿಣಾಮ ದೊಡ್ಡ ಹಾನಿಯೊಂದು ತಪ್ಪಿದಂತಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.