ಬೆಂಗಳೂರು: ಚೀನಾ ಪ್ರವಾಸ ಕೈಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿಯವರ ನಿಯೋಗವನ್ನು ಸೇರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಲಾಗಿತ್ತು. ಆದರೆ ಗ್ರಾಮ ಪಂಚಾಯಿತಿ ಚುನಾವಣೆ ಹಾಗೂ ಪೂರ್ವನಿಗದಿತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಅವರು ತಮ್ಮ ಬದಲು ಬೇರೊಬ್ಬ ಅಧಿಕಾರಿಯನ್ನು ಕಳುಹಿಸುವ ಭರವಸೆ ನೀಡಿದ್ದರು.
ಅದರಂತೆ ಪ್ರಧಾನಿಯವರ ಪ್ರವಾಸದಲ್ಲಿ ಮುಖ್ಯಮಂತ್ರಿಗಳ ಬದಲಾಗಿ ಬಿಬಿಎಂಪಿ ಆಯುಕ್ತರಾಗಿರುವ ಐಎಎಸ್ ಅಧಿಕಾರಿ ಟಿ.ಎಂ. ವಿಜಯಭಾಸ್ಕರ್ ಅವರನ್ನು ಕಳುಹಿಸಲು ನಿರ್ಧರಿಸಲಾಗಿತ್ತು. ಆದರೆ ಇದೀಗ ಅವರ ಪ್ರವಾಸವೂ ರದ್ದಾಗಿದೆ. ಈಗ ಪ್ರಧಾನಿಯವರ ಚೀನಾ ಪ್ರವಾಸದಲ್ಲಿ ಕರ್ನಾಟಕದಿಂದ ಯಾರು ಪಾಲ್ಗೊಳ್ಳುವರು ಎಂಬ ಪ್ರಶ್ನೆ ಉದ್ಭವಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.