ನವದೆಹಲಿ: ಕರ್ನಲ್ ಸಿ.ಕೆ. ನಾಯ್ಡು ಪ್ರಶಸ್ತಿ ಸಮಿತಿಯು ರಾಜಿಂದರ್ ಗೋಯಲ್ ಹಾಗೂ ಪದ್ಮಾಕರ್ ಶಿವಾಳ್ಕರ್ ಅವರನ್ನು ಕ.ಸಿ.ಕೆ. ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿ 2016ಕ್ಕೆ ನೇಮಕ ಮಾಡಿದೆ.
ಎನ್. ರಾಮ್, ರಾಮಚಂದ್ರ ಗುಹಾ ಹಾಗೂ ಡಯಾನಾ ಎಡುಲ್ಜಿ ಅವರನ್ನೊಳಗೊಂಡ ಸಮಿತಿ ಭಾರತ ಕ್ರಿಕೆಟ್ ತಂಡಕ್ಕೆ ಗೋಯಲ್ ಹಾಗೂ ಶಿವಾಳ್ಕರ್ ಅವರು ತೋರಿದ ಪ್ರದರ್ಶನ, ಸಾಧನೆ, ಸೇವೆಯನ್ನು ಬಿಸಿಸಿಐ ಗಮನಿಸಬೇಕಿದೆ ಎಂದು ಸಮಿತಿ ತಿಳಿಸಿದೆ.
ರಾಜಿಂದರ್ ಗೋಯಲ್ ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ 750 ವಿಕೆಟ್ಗಳನ್ನು ಹಾಗೂ ರಣಜಿ ಕ್ರಿಕೆಟ್ನಲ್ಲಿ 637 ವಿಕೆಟ್ಗಳನ್ನು ಪಡೆದಿದ್ದಾರೆ.
ಶಿವಾಳ್ಕರ್ ಅವರು 124 ಪ್ರಥಮ ದರ್ಜೆ ಕ್ರಿಕೆಟ್ನಿಂದ 589 ವಿಕೆಟ್ಗಳನ್ನು ಪಡೆದಿದ್ದಾರೆ.
ಅವರು 42 ಪಂದ್ಯಗಳಲ್ಲಿ 5 ವಿಕೆಟ್ಗಳನ್ನು ಪಡೆದರೆ 13 ಪಂದ್ಯಗಳಲ್ಲಿ 10 ವಿಕೆಟ್ ಪಡೆದ ಸಾಧನೆ ಮಾಡಿದ್ದರೆ.
ಇದೇ ಮೊದಲ ಬಾರಿ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿಯರಿಗೆ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಭಾರತ ತಂಡದ ಮಾಜಿ ನಾಯಕಿ ಶಾಂತಾ ರಂಗಸ್ವಾಮಿ ಅವರನ್ನು ಈ ಪ್ರಶಸ್ತಿಗೆ ನೇಮಕ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.