ಬೆಂಗಳೂರು : ಕೇರಳದಲ್ಲಿ ಕಮ್ಯುನಿಸ್ಟ್ ಪಕ್ಷಗಳ ದೌರ್ಜನ್ಯದ ವಿರುದ್ಧ ಅನೇಕ ಸಾಮಾಜಿಕ ಸಂಘ, ಸಂಸ್ಥೆಗಳು ಮಾರ್ಚ್ 1 ರಿಂದ 3 ರವರೆಗೆ ದೇಶಾದ್ಯಂತ ಪ್ರತಿಭಟನೆಗೆ ಸಜ್ಜಾಗಿವೆ.
ಕಾರಣವೇ ಇಲ್ಲದೇ ಕೇರಳದಲ್ಲಿ ಸಂಘದ ಕಾರ್ಯಕರ್ತರ ನೆತ್ತರು ಬಸಿಯುತ್ತಲೇ ಇರುವ ಕಮ್ಯುನಿಸ್ಟ್ ಪಕ್ಷಗಳ ನಡೆ ವಿರುದ್ಧ ಸಿಟಿಜನ್ ಫಾರ್ ಡೆಮಾಕ್ರಸಿ ಪ್ರತಿಭಟನೆಯನ್ನು ಕರೆದಿದ್ದು, ಇದಕ್ಕೆ ಅನೇಕ ಸಾಮಾಜಿಕ ಸಂಘ, ಸಂಸ್ಥೆಗಳು ಸಾಥ್ ನೀಡಲಿವೆ.
ಕೇರಳದಲ್ಲಿ ಅನೇಕ ವರ್ಷಗಳ ಹಿಂದಿನಿಂದಲೇ ಆರಂಭವಾದ ಕಮ್ಯುನಿಸ್ಟ್ ಪಕ್ಷದ ಅಮಾನವೀಯ ನಡೆ ಇಂದಿಗೂ ಹಾಗೇ ನಡೆದುಕೊಂಡು ಬಂದಿದೆ. ಮಕ್ಕಳು, ಹೆಣ್ಣುಮಕ್ಕಳು, ಮಾತೆಯರೂ ಎಂದೂ ಲೆಕ್ಕಿಸದೆ ಅಮಾನವೀಯ ಕೃತ್ಯ ಎಸಗುತ್ತಿದ್ದಾರೆ. ಸೈದ್ಧಾಂತಿಕ ಭಿನ್ನಾಭಿಪ್ರಾಯವೇ ಇದಕ್ಕೆಲ್ಲ ಕಾರಣವಾಗಿದೆ. ಮಾನವ ವಿರೋಧಿ, ದೇಶ ವಿರೋಧಿ ನಿಲುವು ಕಮ್ಯುನಿಸ್ಟ್ ಪಕ್ಷಗಳದ್ದು.
ಇದೀಗ ಮತ್ತೆ ಕೇರಳದಲ್ಲಿ ಬಿಜೆಪಿ ಹಾಗೂ ಆರ್ಎಸ್ಎಸ್ ಕಾರ್ಯಕರ್ತರ ಹತ್ಯೆಯ ಸರಣಿಯೇ ನಡೆದಿದೆ. ಈ ಹಿನ್ನೆಲೆಯಲ್ಲಿ ಇದೇ ಮಾರ್ಚ್ 1 ರಿಂದ 2 ದಿನ ದೇಶಾದ್ಯಂತ ಕಮ್ಯುನಿಸ್ಟ್ ಪಕ್ಷಗಳ ನಡೆ ವಿರುದ್ಧ ಪ್ರತಿಭಟನೆ ನಡೆಯಲಿದೆ.
ಇಂದು ಬೆಂಗಳೂರಿನ ಟೌನ್ ಹಾಲ್ ಎದುರು ಪ್ರಾರಂಭವಾಗಲಿರುವ ಬೃಹತ್ ಪ್ರತಿಭಟನೆಯಲ್ಲಿ ಆರ್ಎಸ್ಎಸ್ನ ಕ್ಷೇತ್ರೀಯ ಸಂಘಚಾಲಕ್ ವಿ. ನಾಗರಾಜ್, ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ, ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ಎಸ್. ಯಡಿಯೂರಪ್ಪ, ಬಿಜೆಪಿ ಶಾಸಕ ಸುರೇಶ್ ಕುಮಾರ್, ನಿರ್ದೇಶಕ ಟಿ. ಎಸ್. ನಾಗಾಭರಣ ಸೇರಿದಂತೆ ಅನೇಕ ಗಣ್ಯರು, ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಕಮ್ಯುನಿಸ್ಟ್ ಪಕ್ಷಗಳ ದೌರ್ಜನ್ಯದ #EndViolenceCPM ಎಂಬ ಹ್ಯಾಷ್ಟ್ಯಾಗ್ನೊಂದಿಗೆ ಟ್ವಿಟರ್ನಲ್ಲಿ ಕೂಡಾ ಕ್ಯಾಂಪೇನ್ ಮಾಡಲಾಗುತ್ತಿದೆ.
ಅನವಶ್ಯಕವಾಗಿ ಹತ್ಯೆಯ ರಾಜಕೀಯಕ್ಕೆ ಮುಂದಾಗಿರುವ ಕಮ್ಯುನಿಸ್ಟ್ ಪಕ್ಷಗಳ ವಿರುದ್ಧದ ಪ್ರತಿಭಟನೆಯಲ್ಲಿ ದೇಶದ ಎಲ್ಲರೂ ಕೈಜೋಡಿಸಬೇಕೆಂದು ಸಿಟಿಜನ್ ಫಾರ್ ಡೆಮಾಕ್ರಸಿ ಪ್ರಕಟಣೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.