ಬೆಂಗಳೂರು: ಗಾಂಧೀಜಿಯವರ ತತ್ವಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಜನರಿಗೆ ತಲುಪಿಸುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಎಲ್ಲಾ ಜಿಲ್ಲೆಗಳಲ್ಲೂ ಗಾಂಧಿ ಭವನ ನಿಮಾರ್ಣಕ್ಕೆ ಚಿಂತಿಸಲಾಗುವುದು. ಗಾಂಧಿ ಸ್ಮಾರಕ ನಿಧಿ ಕಾರ್ಯಕ್ಕೆ ಸರಕಾರ ಎಲ್ಲ ರೀತಿಯಲ್ಲೂ ಸಹಾಯಹಸ್ತ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಕರ್ನಾಟಕ ಗಾಂಧಿ ಸ್ಮಾರಕ ನಿಧಿ ವತಿಯಿಂದ ಇಲ್ಲಿನ ಸೆಂಟ್ರಲ್ ಕಾಲೇಜು ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿದ್ದ ’ಕರ್ನಾಟಕದಲ್ಲಿ ಗಾಂಧಿ ಮೊದಲ ಹೆಜ್ಜೆ’ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕರ್ನಾಟಕಕ್ಕೂ ಗಾಂಧೀಜಿಯವರಿಗೂ ಅವಿನಾಭಾವ ಸಂಬಂಧವಿದ್ದು, ಅವರು ರಾಜ್ಯಕ್ಕೆ ಹಲವು ಬಾರಿ ಭೇಟಿ ನೀಡಿದ್ದರು. ಇದು ನಮ್ಮ ಹೆಮ್ಮೆಯ ವಿಚಾರ ಎಂದರು. ರಾಜ್ಯದ ನೆಲ ಗಾಂಧೀಜಿ ಅವರ ತತ್ವಗಳಿಂದ ಪ್ರಭಾವಿತವಾಗಿದ್ದು, ರಾಜ್ಯದಲ್ಲಿ ಹಲವು ಗಾಂಧೀವಾದಿಗಳನ್ನು ಕಾಣುತ್ತಿದ್ದೇವೆ ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.