ಗುರ್ಗಾಂವ್: ಪ್ರಧಾನಿ ನರೇಂದ್ರ ಮೋದಿ ಅವರು ಆರಂಭಿಸಿದ ಸ್ವಚ್ಛ ಭಾರತ ಅಭಿಯಾನದ ಅಡಿಯಲ್ಲಿ ದೇಶಾದ್ಯಂತ ಸ್ವಚ್ಛ ಶಕ್ತಿ ಸಪ್ತಾಹ ಮಾರ್ಚ್ 1 ರಿಂದ 8ರ ವರೆಗೆ ನಡೆಯಲಿದೆ.
ಕಾರ್ಯಕ್ರಮವನ್ನು ಕೇಂದ್ರದ ಗ್ರಾಮೀಣಾಭಿವೃದ್ಧಿ ಸಚಿವ ನರೇಂದ್ರ ಸಿಂಗ್ ತೋಮರ್ ಗುರ್ಗಾಂವ್ನ ತಾವು ದೇವಿ ಲಾಲ್ ಸ್ಟೇಡಿಯಂನಲ್ಲಿ ಉದ್ಘಾಟಿಸಿದರು. ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ಸಚಿವ ಓಂಪ್ರಕಾಶ್ ಧಾನ್ಕರ್ ಉಪಸ್ಥಿತರಿದ್ದರು.
ಈ ವೇಳೆ ಸ್ಥಳೀಯ ಮಹಿಳಾ ಚಾಂಪಿಯನ್ ಕ್ರೀಡಾಪಟುಗಳಿಗೆ ಗೌರವ ಸನ್ಮಾನ ಕಾರ್ಯಕ್ರಮ, ಸ್ವಚ್ಛ ಭಾರತ ಅಭಿಯಾನ (ಗ್ರಾಮೀಣ)ದಲ್ಲಿ ಮಹಿಳೆಯರ ಪಾತ್ರ ಮತ್ತು ನಾಯಕತ್ವ ಸಂಬಂಧಿತ ಕಾರ್ಯಕ್ರಮಗಳು, ಶಾಲೆಗಳಲ್ಲಿ ಹೆಣ್ಣು ಮಕ್ಕಳ ಪಾತ್ರ ಮತ್ತು ನೈರ್ಮಲ್ಯ ಕುರಿತ ಕಾರ್ಯಕ್ರಮಗಳು, ಜಿಲ್ಲಾ ಮತ್ತು ರಾಜ್ಯ ಮಟ್ಟದ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.
ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 8 ರಂದು ಗುಜರಾತ್ನ ಗಾಂಧಿನಗರದಲ್ಲಿ ನಡೆಯಲಿರುವ ಸ್ವಚ್ಛ ಶಕ್ತಿ ಸಪ್ತಾಹ-2017- ಮಹಿಳಾ ಸರಪಂಚ್ಗಳ ರಾಷ್ಟ್ರೀಯ ಸಮಾರಂಭವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಸ್ವಚ್ಛ ಭಾರತ ಅಭಿಯಾನದ ಅಡಿಯಲ್ಲಿ ಈವರೆಗೆ 100 ಜಿಲ್ಲೆಗಳು 1.66 ಲಕ್ಷ ಗ್ರಾಮಗಳು ಬಯಲು ಶೌಚ ಮುಕ್ತವಾಗಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.