ನವದೆಹಲಿ: ಡಿಜಿಟಲ್ ವಹಿವಾಟುಗಳನ್ನು ಹೆಚ್ಚಿಸುವ ಉದ್ದೇಶದಿಂದ ಎಲ್ಲ ಬ್ಯಾಂಕುಗಳು ಮಾರ್ಚ್ 31ರ ಒಳಗಾಗಿ ಗ್ರಾಹಕರಿಗೆ ಮೊಬೈಲ್ ಬ್ಯಾಂಕಿಂಗ್ ಸೌಲಭ್ಯ ಒದಗಿಸುವಂತೆ ಕೇಂದ್ರ ಸರ್ಕಾರ ಆಗ್ರಹಿಸಿದೆ.
ಬ್ಯಾಂಕ್ಗಳು ಮಾರ್ಚ್ 31ರ ವರೆಗೆ ರಾಷ್ಟ್ರವ್ಯಾಪಿ ಅಭಿಯಾನ ನಡೆಸಿ ಮೊಬೈಲ್ ಹೊಂದಿದ ಗ್ರಾಹಕರು ಸಕ್ರಿಯವಾಗಿ ಮೊಬೈಲ್ ಬ್ಯಾಂಕಿಂಗ್ ನಡೆಸುವುದನ್ನು ಖಚಿತಪಡಿಸುವಂತೆ ಕೇಳಿಕೊಳ್ಳಲಾಗಿದೆ ಎಂದು ಇಲೆಕ್ಟ್ರಾನಿಕ್ ಮತ್ತು ಐಟಿ ಕಾರ್ಯದರ್ಶಿ ಅರುಣಾ ಸುಂದರಾಜನ್ ಹೇಳಿದ್ದಾರೆ.
ಮೊಬೈಲ್ ಬ್ಯಾಂಕಿಂಗ್ ನಡೆಸಲು ಬಯಸುವ ಗ್ರಾಹಕರಿಗೆ ಅದರಲ್ಲಿ ಸಕ್ರಿಯಗೊಳ್ಳುವಂತೆ ಮಾಡಲು ಈ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಭೀಮ್ ಮತ್ತು ಯುಪಿಐ ಅಪ್ಲಿಕೇಶನ್ ಬಳಸುವ ಗ್ರಾಹಕರು ನೇರವಾಗಿ ಮೊಬೈಲ್ ಬ್ಯಾಂಕಿಂಗ್ಗೆ ಸಕ್ರಿಯಗೊಳ್ಳಬಹುದು ಎಂದು ಸುಂದರಾಜನ್ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 8ರಂದು ಹಳೆ ನೋಟು ನಿಷೇಧಿಸುವುದಾಗಿ ಘೋಷಿಸಿದ ನಂತರ ಕೇಂದ್ರ ಸರ್ಕಾರ ಡಿಜಿಟಲ್ ವೇದಿಕೆಗಳ ಮೂಲಕ ಡಿಜಿಟಲ್ ಪಾವತಿಗಳಿಗೆ ಹೆಚ್ಚು ಒತ್ತು ನೀಡುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.