ನವದೆಹಲಿ: ಅಂತಾರಾಷ್ಟ್ರೀಯ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ವಿತ್ತ ಸಚಿವ ಅರುಣ್ ಜೇಟ್ಲಿಯವರು ಗುರುವಾರ ನೇಪಾಳಕ್ಕೆ ಪ್ರಯಾಣ ಬೆಳೆಸಿದ್ದಾರೆ.
ಕಠ್ಮಂಡುವಿನಲ್ಲಿ ಮಾ.2-3ರವರೆಗೆ ‘ದಿ ನೇಪಾಳ್ ಇನ್ವೆಸ್ಟ್ಮೆಂಟ್ ಸಮಿತ್ 2017’ ನಡೆಯಲಿದ್ದು 12 ದೇಶಗಳ ಒಟ್ಟು 250 ಕಂಪನಿಗಳು ಇದರಲ್ಲಿ ಪಾಲ್ಗೊಳ್ಳಲಿವೆ. ನೇಪಾಳದಲ್ಲಿ ಮೂಲಸೌಕರ್ಯ ಹೂಡಿಕೆಯನ್ನು ಉತ್ತೇಜಿಸುವ ಸಲುವಾಗಿ ಈ ಸಮಿತ್ನ್ನು ಏರ್ಪಡಿಸಲಾಗಿದೆ.
ಅರುಣ್ ಜೇಟ್ಲಿಯವರು ಈ ಸಮಿತ್ ಪ್ರಮುಖ ಭಾಷಣಕಾರರಾಗಿದ್ದಾರೆ, ಅಮೆರಿಕ, ಇಂಗ್ಲೆಂಡ್, ಬಾಂಗ್ಲಾದೇಶ್, ಭೂತಾನ್, ಇಟಲಿ, ಫ್ರಾನ್ಸ್. ಸ್ಪೇನ್ ಮತ್ತು ವಿಯಟ್ನಾಂ ದೇಶಗಳು ಇದರಲ್ಲಿ ಪಾಲ್ಗೊಳ್ಳಲಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.