ಬೆಂಗಳೂರು: ಈ ವರ್ಷ ಎ.29 ಮತ್ತು 30ರಂದು ನಡೆಯಬೇಕಿದ್ದ ಸಿಇಟಿ ಪರೀಕ್ಷೆಯು ಕಾರ್ಮಿಕ ಸಂಘಟನೆ ನಡೆಸಿದ ಮುಷ್ಕರದ ಹಿನ್ನೆಲೆಯಲ್ಲಿ ಮೇ.12ಕ್ಕೆ ಮುಂದೂಡಲ್ಪಟ್ಟಿದ್ದು, ಈ ಬಾರಿ ಒಟ್ಟು 1,57,580 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ 82079 ವಿದ್ಯಾರ್ಥಿಗಳಿದ್ದು, 75501 ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯದಲ್ಲಿ 343 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಾರ್ಯನಿರ್ವಾಹಕ ನಿರ್ದೇಶಕಿ ಸುಷ್ಮಾ ಗೋಡಬೋಲೆ ತಿಳಿಸಿದ್ದಾರೆ.
ವೃತ್ತಿ ಶಿಕ್ಷಣ ಕೋರ್ಸ್ಗಳಿಗೆ ಮೇ.12 ಮತ್ತು 13 ರಂದು ಎಂಜಿನಿಯರಿಂಗ್, ವೈದ್ಯಕೀಯ, ಆಯುರ್ವೇದ ಸೇರಿದಂತೆ ಇತರ ಕೋರ್ಸ್ಗಳಿಗೆ ಸಿಇಟಿ ಪ್ರವೇಶ ಪರೀಕ್ಷೆಯು ನಡೆಯಲಿದೆ.
ಮೇ. 12 ರಂದು ಬೆಳಗ್ಗೆ 10.30ರಿಂದ 11.50ರ ವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30ರಿಂದ 3.30ರವರೆಗೆ ಗಣಿತ ಪರೀಕ್ಷೆಗೆ ನಡೆಯಲಿದೆ.
ಮೇ.13ರಂದು ಬೆಳಗ್ಗೆ 10.30ರಿಂದ 11.50ರ ವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30ರಿಂದ 3.30ರ ವರೆಗೆ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ.
ಮೇ.16 ರಂದು ಕೃಷಿ ವಿಷಯಕ್ಕೆ ಸಂಬಂಧಿಸಿದ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ ಎಂದು ಹೇಳಿದರು.
ರಾಜ್ಯದ ರಾಜಧಾನಿ ಬೆಂಗಳೂರು 73 ಪರೀಕ್ಷಾ ಕೇಂದ್ರಗಳು ಹೊಂದಿದ್ದು, 38787 ವಿದ್ಯಾರ್ಥಿಗಳು ಹಾಗೂ ಉಳಿದ 270 ಕೇಂದ್ರಗಳಲ್ಲಿ 1,18,793 ಮಂದಿ ಪರೀಕ್ಷೆ ಬರೆಯಲಿದ್ದಾರೆ. ಇದಕ್ಕೆ ಬೇಕಾದ ಸಕಲ ಸಿದ್ಧತೆಗಳು ನಡೆದಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.