ನವದೆಹಲಿ: 2017-18ನೇ ಸಾಲಿನ ಶೈಕ್ಷಣಿಕ ವರ್ಷದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳ 4000 ಸ್ನಾತಕೋತ್ತರ ಸೀಟುಗಳಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದವಿತ್ತ ನಡ್ಡಾ ಅವರು, ಇದೊಂದು ಸಾರ್ವಕಾಲಿಕ ದಾಖಲೆ ಸಂಖ್ಯೆಯಾಗಿದೆ. ಇದು ಉನ್ನತ ಮಟ್ಟದ ವೈದ್ಯಕೀಯ ಶಿಕ್ಷಣದ ಉನ್ನತ ಮಟ್ಟದ ಸುಧಾರಣೆಯಾಗಿದೆ. ದೇಶಾದ್ಯಂತ ಸ್ನಾತಕೋತ್ತರ ಸೀಟುಗಳ ಸಂಖ್ಯೆ 35,117ಕ್ಕೆ ತಲುಪಲಿದೆ ಎಂದು ಹೇಳಿದ್ದಾರೆ.
ಒಟ್ಟು ಹೆಚ್ಚುವರಿ ಸೀಟುಗಳಲ್ಲಿ ವೈದ್ಯಕೀಯ ಕಾಲೇಜುಗಳ ಸೀಟುಗಳ ಸಂಖ್ಯೆ 2,046 ಇದ್ದು, ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಸ್ನಾತಕೋತ್ತರ ಸೀಟುಗಳನ್ನು ಹೆಚ್ಚಿಸುವ ಗುರಿಯೊಂದಿಗೆ ವಿದ್ಯಾರ್ಥಿ-ಶಿಕ್ಷಕರ ಅನುಪಾತ ತಿದ್ದುಪಡಿಗೆ ಸರ್ಕಾರ ನಿರ್ಧರಿಸಿದೆ ಎಂದು ಅವರು ಹೇಳಿದ್ದಾರೆ.
ದೇಶಾದ್ಯಂತ 212 ಸರ್ಕಾರಿ ಕಾಲೇಜುಗಳ ಪೈಕಿ ಹಲವು ಕಾಲೇಜುಗಳು ಹೆಚ್ಚುವರಿ ಸೀಟುಗಳ ಸೇರ್ಪಡೆಗೆ ಪ್ರಸ್ತಾವನೆ ಸಲ್ಲಿಸುತ್ತಿದ್ದು, ಮಾರ್ಚ್ ತಿಂಗಳಲ್ಲಿ ಇನ್ನೂ 1000 ಸೀಟುಗಳನ್ನು ಸೇರಿಸುವ ಸಾಧ್ಯತೆ ಇದೆ. ಇದು ಎಂಡಿ/ಎಂಎಸ್ ಕೋರ್ಸ್ಗಳಿಗೆ ಸರಿಸಮಾನವಾದ ಡಿಪ್ಲೋಮೇಟ್ ಆಫ್ ನ್ಯಾಶನಲ್ ಬೋರ್ಡ್ (ಡಿಎನ್ಬಿ) ಕೂಡ ಒಳಗೊಂಡಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.