ನವದೆಹಲಿ: ದೇಶವನ್ನು ಸಂಪೂರ್ಣ ಬಯಲು ಶೌಚ ಮುಕ್ತಗೊಳಿಸಲು ಅಭಿಯಾನ ಆರಂಭಿಸಿರುವ ಕೇಂದ್ರ ಸರ್ಕಾರ ತನ್ನ ಕಾರ್ಯದಲ್ಲಿ ಸಫಲತೆಯನ್ನು ಕಾಣುತ್ತಿದೆ. ದೇಶದ ಎಲ್ಲಾ ರಾಜ್ಯಗಳು ಈ ಅಭಿಯಾನಕ್ಕೆ ಕೈಜೋಡಿಸಿದ್ದು, ಈಗಾಗಲೇ ಹಲವಾರು ಜಿಲ್ಲೆಗಳನ್ನು ಬಯಲು ಶೌಚ ಮುಕ್ತ ಜಿಲ್ಲೆಗಳು ಎಂದು ಘೋಷಿಸಲಾಗಿದೆ.
ದೇಶದ ಒಟ್ಟು 101 ಜಿಲ್ಲೆಗಳನ್ನು ಕೇಂದ್ರ ಬಯಲು ಶೌಚ ಮುಕ್ತ ಜಿಲ್ಲೆಗಳೆಂದು ಘೋಷಿಸಿದೆ. ಇದರಲ್ಲಿ ರಾಜ್ಯದ ದಕ್ಷಿಣಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ, ಕೊಡಗು ರಾಜ್ಯಗಳು ಸೇರಿವೆ.
2019ರ ವೇಳೆಗೆ ಭಾರತವನ್ನು ಬಯಲು ಶೌಚ ಮುಕ್ತ ರಾಷ್ಟ್ರವನ್ನಾಗಿಸುವ ಗುರಿಯನ್ನು ಹೊಂದಲಾಗಿದ್ದು, ಕೇಂದ್ರ ತನ್ನ ಕಾರ್ಯದಲ್ಲಿ ಶೇ.64ರಷ್ಟು ಯಶಸ್ವಿಯಾಗಿದೆ. 3.5 ಕೋಟಿ ಶೌಚಾಲಯಗಳನ್ನು ನಿರ್ಮಿಸುವ ಗುರಿ ಕೇಂದ್ರದ ಮುಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.