ಬೆಂಗಳೂರು: ಮಾಜಿ ಸಿಎಂ ಬಂಗಾರಪ್ಪನವರ ಪುತ್ರ ಹಾಗೂ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಶೀಘ್ರದಲ್ಲೇ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ.
ಕುಮಾರ್ ಬಂಗಾರಪ್ಪ ಅವರು ಕಾಂಗ್ರೆಸ್ಗೆ ಗುಡ್ಬೈ ಹೇಳಲಿದ್ದಾರೆ ಎಂಬ ಸುದ್ದಿ ಕೆಲ ದಿನಗಳಿಂದ ಕೇಳಿ ಬರುತ್ತಿತ್ತು, ಆದರೆ ಇಂದು ಅವರು ರಾಜೀನಾಮೆಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ ಮತ್ತು ಬಿಜೆಪಿ ಸೇರ್ಪಡೆಯನ್ನು ಖಚಿತಪಡಿಸಿದ್ದಾರೆ.
ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರಿಗೆ ಕಳುಹಿಸಿಕೊಡುವುದಾಗಿ ತಿಳಿಸಿರುವ ಅವರು, ಸುಸ್ಥಿರ ಸರ್ಕಾರ ತರುವುದಕ್ಕಾಗಿ ರಾಜೀನಾಮೆ ನೀಡುತ್ತಿದ್ದೇನೆ, ಪಕ್ಷ ಬದಲಾಯಿಸಿದ ಮಾತ್ರಕ್ಕೆ ವ್ಯಕ್ತಿತ್ವ ಬದಲಾಗಲ್ಲ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.