ನವದೆಹಲಿ: ವಾರ್ಷಿಕ 40 ಮಿಲಿಯನ್ ಪ್ರಯಾಣಿಕರನ್ನು ನಿರ್ವಹಿಸುವ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಐಜಿಐಎ) ವಿಶ್ವದ ಎರಡನೇ ಅತ್ಯುತ್ತಮ ವಿಮಾನ ನಿಲ್ದಾಣ ಶ್ರೇಯಾಂಕ ಪಡೆದಿದೆ ಎಂದು ಜಾಗತಿಕ ಸಮೀಕ್ಷೆ ತಿಳಿಸಿದೆ.
ದೆಹಲಿ ಇಂಟರ್ನ್ಯಾಶನಲ್ ಏರ್ಪೋರ್ಟ್ ಲಿಮಿಟೆಡ್ (ಡಿಐಎಲ್)ನ ವಿಮಾನ ನಿಲ್ದಾಣ ಸೇವೆ ಗುಣಮಟ್ಟ (ಎಎಸ್ಕ್ಯೂ) 2015ರ 4.96ರಿಂದ 2016ರಲ್ಲಿ 4.99ಕ್ಕೆ ಏರಿಕೆಯಾಗಿದ್ದು, ದೆಹಲಿ ವಿಮಾನ ನಿಲ್ದಾಣ ದಕ್ಷಿಣ ಕೊರಿಯಾದ ಇಂಚಿಯಾನ್ ನಿಲ್ದಾಣದ ನಂತರ ಜಾಗತಿಕವಾಗಿ 2ನೇ ಸ್ಥಾನ ಪಡೆದಿದೆ ಎಂದು ಪ್ರಕಟಣೆ ತಿಳಿಸಿದೆ.
ಗ್ರಾಹಕರ ಅನುಭವವನ್ನು ಹೆಚ್ಚಿಸುವಲ್ಲಿ ನಾವು ಗಮನ ಹರಿಸುತ್ತಿದ್ದೇವೆ. ನಿಲ್ದಾಣದ ಉತ್ತಮ ಬೆಳವಣಿಗೆ ಕಂಡುಬಂದಿದ್ದು, ವಿಮಾನ ನಿಲ್ದಾಣ ಮಧ್ಯಸ್ಥಗಾರರ ಜೊತೆ ಸಬಲ ಸಹಯೋಗ ಮತ್ತು ಬೆಂಬಲವನ್ನು ಪಡೆಯುವುದನ್ನು ನಾವು ಮುಂದೆ ನೋಡುತ್ತಿದ್ದೇವೆ. ಶೀಘ್ರದಲ್ಲೇ ನಿಲ್ದಾಣವನ್ನು ವಿಸ್ತೃತಗೊಳಿಸುವ ಕಾರ್ಯ ಆರಂಭಿಸಲಾಗುವುದು ಎಂದು ನಿಲ್ದಾಣದ ಸಿಇಒ ಪ್ರಭಾಕರ ರಾವ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.